ದುಬೈ: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ಗಳ ಗೆಲುವು ಕಂಡು ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಪಿ ಮುಡಿಗೇರಿಸಿಕೊಂಡಿದೆ.
50 ಒವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಕಲೆಹಾಕಿದ ನ್ಯೂಜಿಲೆಂಡ್ ಭಾರತಕ್ಕೆ 252 ರನ್ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಭಾರತ 49 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಬಾರಿಸಿತು.
ಈ ಗೆಲುವಿನ ಮೂಲಕ ಭಾರತ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದ್ದು, ಕ್ರಿಕೆಟ್ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದ ತಂಡ ಎನಿಸಿಕೊಂಡಿದೆ.
ಟೀಮ್ ಇಂಡಿಯಾ ಟ್ರೋಫಿ ಗೆಲ್ಲುತ್ತಿದ್ದಂತೆಯೇ ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳು ದಕ್ಷಿಣ ಆಫ್ರಿಕಾದ ಆಟಗಾರ ಡೇವಿಡ್ ಮಿಲ್ಲರ್ ವಿರುದ್ಧ ತಿರುಗಿಬಿದ್ದಿದ್ದಾರೆ. ಮಿಲ್ಲರ್ ಫೋಟೊ ಹಂಚಿಕೊಂಡು ಇನ್ನೊಂದೆರಡು ವಾರಗಳ ಕಾಲ ಯಾವುದೇ ಕಾರಣಕ್ಕೂ ಸಾಮಾಜಿಕ ಜಾಲತಾಣದಲ್ಲಿ ಭಾರತದ ಅಭಿಮಾನಿಗಳಿಗೆ ಕಾಣಿಸಿಕೊಳ್ಳಬೇಡಿ ಎಂದೂ ಸಹ ವಾರ್ನಿಂಗ್ ನೀಡಿದ್ದಾರೆ.
ಇದಕ್ಕೆ ಕಾರಣ ಸೆಮಿಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ಸೋತು ಹೊರಬಿದ್ದ ಬಳಿಕ ಮಾತನಾಡಿದ್ದ ಮಿಲ್ಲರ್ ಭಾರತದ ವಿರುದ್ಧ ನ್ಯೂಜಿಲೆಂಡ್ ಗೆಲ್ಲಬೇಕು ಅವರಿಗೆ ನನ್ನ ಬೆಂಬಲ ಎಂದಿದ್ದು.
ಹೌದು, ಭಾರತ ಹಾಗೂ ನ್ಯೂಜಿಲೆಂಡ್ ಫೈನಲ್ ಮುಖಾಮುಖಿ ಬಗ್ಗೆ ಮಾತನಾಡಿದ್ದ ಮಿಲ್ಲರ್ ನಿಜ ಹೇಳ್ತೀನಿ ನಾನು ಈ ಬಾರಿ ನ್ಯೂಜಿಲೆಂಡ್ ಬೆಂಬಲಿಸುತ್ತೇನೆ ಎಂದಿದ್ದರು. ಅಲ್ಲದೇ ಇದೇ ವೇಳೆ ಭಾರತದ ಪಂದ್ಯಗಳನ್ನು ದುಬೈನಲ್ಲಿ ಆಯೋಜಿಸಿದ್ದರ ಕುರಿತು ಅಸಮಾಧಾನ ಹೊರಹಾಕಿದ ಅವರು ದುಬೈಗೆ ಪ್ರವಾಸ ಮಾಡಿದ್ದು ತಂಡಗಳಿಗೆ ಹಿನ್ನಡೆಯನ್ನುಂಟಮಾಡಿತು ಎಂದು ಐಸಿಸಿ ವಿರುದ್ಧ ಆರೋಪ ಮಾಡಿದ್ದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


