ದುಬೈ: ಇಂದು ( ಮಾರ್ಚ್ 9 ) ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ 2025 ಚಾಂಪಿಯನ್ಸ್ ಟ್ರೋಫಿ ನಡೆಯ ಫೈನಲ್ ಪಂದ್ಯ ನಡೆಯಲಿದೆ.
ಟ್ರೋಫಿಯ ಈ ಅಂತಿಮ ಹಣಾಹಣಿಯಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಟ್ರೋಫಿಗಾಗಿ ಸೆಣಸಾಡಲಿವೆ.
ಎ ಗುಂಪಿನ ಈ ಎರಡು ತಂಡಗಳು ಫೈನಲ್ ಪ್ರವೇಶಿಸಿದ್ದು, ಟೂರ್ನಿಯಲ್ಲಿ ಇತ್ತಂಡಗಳ ನಡುವಿನ ಎರಡನೇ ಮುಖಾಮುಖಿ ಇದಾಗಿದೆ.
ಇನ್ನು ಈ ಬಾರಿ ಯಾವ ತಂಡ ಗೆದ್ದು ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ ಎಂಬ ಚರ್ಚೆಗಳು ಸದ್ಯ ದೊಡ್ಡ ಮಟ್ಟದಲ್ಲಿ ನಡೆಯುತ್ತಿವೆ.
ಈ ಕುರಿತು ದಕ್ಷಿಣ ಆಫ್ರಿಕಾ ತಂಡದ ಡೇವಿಡ್ ಮಿಲ್ಲರ್ ಸಹ ಮಾತನಾಡಿದ್ದು, ನಿಜ ಹೇಳ್ತೀನಿ ನಾನು ಈ ಬಾರಿ ನ್ಯೂಜಿಲೆಂಡ್ ಬೆಂಬಲಿಸುತ್ತೇನೆ ಎಂದಿದ್ದಾರೆ.
ಇದೇ ವೇಳೆ ಭಾರತದ ಪಂದ್ಯಗಳನ್ನು ದುಬೈನಲ್ಲಿ ಆಯೋಜಿಸಿದ್ದರ ಕುರಿತು ಅಸಮಾಧಾನ ಹೊರಹಾಕಿದ ಅವರು ದುಬೈಗೆ ಪ್ರವಾಸ ಮಾಡಿದ್ದು ತಂಡಗಳಿಗೆ ಹಿನ್ನಡೆಯನ್ನುಂಟಮಾಡಿತು ಎಂದು ಐಸಿಸಿ ವಿರುದ್ಧ ಆರೋಪ ಮಾಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


