Monday, November 2, 2026
spot_img
More
    spot_img
    HomeChampions Trophy 2025Champions Trophy 2025: ಲೀಗ್ ಪಂದ್ಯದಲ್ಲಿ ಕೊಹ್ಲಿ ಸೇರಿ ಭಾರತದ ಪ್ರಮುಖ 5 ವಿಕೆಟ್ ಪಡೆದಿದ್ದ...

    Champions Trophy 2025: ಲೀಗ್ ಪಂದ್ಯದಲ್ಲಿ ಕೊಹ್ಲಿ ಸೇರಿ ಭಾರತದ ಪ್ರಮುಖ 5 ವಿಕೆಟ್ ಪಡೆದಿದ್ದ ಬೌಲರ್ ಫೈನಲ್‌ನಿಂದ ಔಟ್!

    ದುಬೈ: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

    ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ಬ್ಯಾಟಿಂಗ್ ಆರಿಸಿಕೊಂಡಿದೆ.

    ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಭಾರತ ತಂಡವೇ ಈ ಪಂದ್ಯದಲ್ಲಿಯೂ ಕಣಕ್ಕಿಳಿದಿದ್ದು, ತಂಡದಲ್ಲಿ ಹೆಚ್ಚೇನೂ ಬದಲಾವಣೆಯಾಗಿಲ್ಲ. ಆದರೆ ನ್ಯೂಜಿಲೆಂಡ್ ತಂಡದಲ್ಲಿ ಪ್ರಮುಖ ಬದಲಾವಣೆಯಾಗಿದ್ದು, ಸೆಮಿಫೈನಲ್ ಪಂದ್ಯದಲ್ಲಿ ಗಾಯಕ್ಕೊಳಗಾದ ಮ್ಯಾಟ್ ಹೆನ್ರಿ ಫೈನಲ್ ಪಂದ್ಯದಿಂದ ಹೊರಬಿದ್ದಿದ್ದಾರೆ.

    ಇದೇ ಮ್ಯಾಟ್ ಹೆನ್ರಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ನಡೆದಿದ್ದ ಲೀಗ್ ಹಂತದ ಪಂದ್ಯದಲ್ಲಿ ಐದು ವಿಕೆಟ್‌ಗಳನ್ನು ಪಡೆದು ತಂಡವನ್ನು ಕಾಡಿದ್ದರು. ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಶುಬ್‌ಮನ್ ಗಿಲ್, ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ಅವರ ವಿಕೆಟ್‌ಗಳನ್ನು ಪಡೆದಿದ್ದರು.

    ಹೀಗೆ ಟೀಮ್ ಇಂಡಿಯಾದ ಪ್ರಮುಖ ವಿಕೆಟ್‌ಗಳನ್ನು ಪಡೆದಿದ್ದ ಮ್ಯಾಟ್ ಹೆನ್ರಿ ಇಂದಿನ ಪಂದ್ಯಕ್ಕೆ ಅಲಭ್ಯರಾಗಿರುವುದು ನ್ಯೂಜಿಲೆಂಡ್ ಮೇಲೆ ಪ್ರಭಾವ ಬೀರಲಿದೆಯಾ ನೋಡಬೇಕಿದೆ. ಮ್ಯಾಟ್ ಹೆನ್ರಿ ಬದಲಾಗಿ ನಾಥನ್ ಸ್ಮಿತ್ ತಂಡ ಸೇರಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search