ದುಬೈ: ಇಂದು ( ಮಾರ್ಚ್ 9 ) ಮಧ್ಯಾಹ್ನ 2.30ಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.
ಇನ್ನು ಇತ್ತಂಡಗಳ ನಡುವೆ ಈ ಟೂರ್ನಿಯಲ್ಲಿ ನಡೆಯಲಿರುವ ಎರಡನೇ ಪಂದ್ಯ ಇದಾಗಿದ್ದು ಲೀಗ್ ಹಂತದಲ್ಲಿ ನಡೆದ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಗೆದ್ದು ಬೀಗಿತ್ತು.
ಅತ್ತ ತನ್ನ ಕ್ರಿಕೆಟ್ ಇತಿಹಾಸದಲ್ಲಿಯೇ ಎರಡು ಬಾರಿ ಐಸಿಸಿ ಟ್ರೋಫಿಗಳನ್ನು ಗೆದ್ದಿರುವ ನ್ಯೂಜಿಲೆಂಡ್ ಆ ಎರಡೂ ಟೂರ್ನಿಯಲ್ಲೂ ಫೈನಲ್ ಪಂದ್ಯಗಳಲ್ಲಿ ಭಾರತದ ವಿರುದ್ಧವೇ ಜಯ ಸಾಧಿಸಿತ್ತು.
ಹೀಗೆ ಎರಡು ಬಲಿಷ್ಟ ತಂಡಗಳ ಕಾಳಗದ ಬಗ್ಗೆ ಕುತೂಹಲ ಮೂಡಿದ್ದು ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಪಂದ್ಯದಲ್ಲಿ ಭಾರತದ ಯಾವ ಆಟಗಾರ ಗೇಮ್ ಚೇಂಜರ್ ಆಗಲಿದ್ದಾನೆ ಎಂದು ತಿಳಿಸಿದ್ದಾರೆ.
ತಂಡದ ನಾಲ್ಕನೇ ಕ್ರಮಂಕದ ಆಟಗಾರ ಶ್ರೇಯಸ್ ಅಯ್ಯರ್ ಫೈನಲ್ ಪಂದ್ಯದಲ್ಲಿ ಗೇಮ್ ಚೇಂಜರ್ ಆಗಲಿದ್ದಾನೆ ಎಂದು ಊಹಿಸಿದ್ದು, ಕಾರಣ ಆತನ ಇತ್ತೀಚಿಗಗಿನ ಫಾರ್ಮ್ ಎಂದೂ ಸಹ ತಿಳಿಸಿದ್ದಾರೆ. ಕಳೆದ ಏಕದಿನ ವಿಶ್ವಕಪ್ ಟೂರ್ನಿ ವೇಳೆ ಅದ್ಭುತ ಬ್ಯಾಟಿಂಗ್ ಮಾಡಿದ್ದ. ವಾಂಖೆಡೆಯಲ್ಲಿ ನ್ಯೂಜಿಲೆಂಡ್ ವಿರುದ್ದ ಚೆನ್ನಾಗಿ ಬ್ಯಾಟ್ ಮಾಡಿದ್ದ. ಈ ಬಾರಿಯ ಟೂರ್ನಿಯಲ್ಲೂ ಅದೇ ರೀತಿ ಒಳ್ಳೆಯ ಬ್ಯಾಟಿಂಗ್ ಮಾಡಿದ್ದಾನೆ ಎಂದು ಅಶ್ವಿನ್ ಹೇಳಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


