Monday, November 2, 2026
spot_img
More
    spot_img
    HomeTop StoryChampions Trophy 2025: ಇಲ್ಲಿಯವರೆಗೂ ಟೂರ್ನಿಯಲ್ಲಿ ಅತಿಹೆಚ್ಚು ರನ್ ಬಾರಿಸಿದವರಾರು? ಯಾರ ಪಾಲಾಗಲಿದೆ ಗೋಲ್ಡನ್ ಬ್ಯಾಟ್?

    Champions Trophy 2025: ಇಲ್ಲಿಯವರೆಗೂ ಟೂರ್ನಿಯಲ್ಲಿ ಅತಿಹೆಚ್ಚು ರನ್ ಬಾರಿಸಿದವರಾರು? ಯಾರ ಪಾಲಾಗಲಿದೆ ಗೋಲ್ಡನ್ ಬ್ಯಾಟ್?

    ದುಬೈ: ಇಂದು ( ಮಾರ್ಚ್ 9 ) ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ 2025 ಚಾಂಪಿಯನ್ಸ್ ಟ್ರೋಫಿ ನಡೆಯ ಫೈನಲ್ ಪಂದ್ಯ ನಡೆಯಲಿದೆ. ಟ್ರೋಫಿಯ ಈ ಅಂತಿಮ ಹಣಾಹಣಿಯಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಟ್ರೋಫಿಗಾಗಿ ಸೆಣಸಾಡಲಿವೆ.

    ಇನ್ನು ಈ ಪಂದ್ಯದಲ್ಲಿ ಯಾವ ತಂಡ ಗೆದ್ದು ಟ್ರೋಫಿ ಎತ್ತಿಹಿಡಿಯಲಿದೆ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿ ನಡೆಯುತ್ತಿದೆ. ಮತ್ತೊಂದೆಡೆ ಈ ಬಾರಿಯ ಟೂರ್ನಿಯಲ್ಲಿ ಯಾವ ಆಟಗಾರ ಅಂತಿಮವಾಗಿ ಅತಿಹೆಚ್ಚು ರನ್ ಬಾರಿಸಿ ಗೋಲ್ಡನ್ ಬ್ಯಾಟ್ ಪ್ರಶಸ್ತಿ ಪಡೆಯಲಿದ್ದಾರೆ ಎಂಬ ಕುತೂಹಲ ಮೂಡಿದೆ.

    ಫೈನಲ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್‌ನ ಬೆನ್ ಡಕೆಟ್ 227 ರನ್ ಕಲೆಹಾಕುವುದರ ಮೂಲಕ ಟೂರ್ನಿಯಲ್ಲಿ ಅಧಿಕ ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದು, ಸದ್ಯ ಗೋಲ್ಡನ್ ಬ್ಯಾಟ್ ರೇಸ್‌ನಲ್ಲಿ ಮುಂದಿದ್ದಾರೆ. ಆದರೆ ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವ ಇತ್ತಂಡಗಳ ಯಾವುದಾದರೂ ಒಬ್ಬ ಆಟಗಾರನಿಗೆ ಈ ಪ್ರಶಸ್ತಿ ಲಭಿಸಲಿದೆ. ಹಾಗಾದರೆ ಗೋಲ್ಡನ್ ಬ್ಯಾಟ್‌ ರೇಸ್‌ನಲ್ಲಿರುವ ಟಾಪ್ 5 ಆಟಗಾರರು ಯಾರು ಮುಂದಿದೆ ನೋಡಿ

    ರಚಿನ್ ರವೀಂದ್ರ – 226 ರನ್

    ವಿರಾಟ್ ಕೊಹ್ಲಿ – 217 ರನ್

    ಶ್ರೇಯಸ್ ಐಯ್ಯರ್ – 195 ರನ್

    ಟಾಮ್ ಲಾಥಮ್ – 195 ರನ್

    ಕೇನ್ ವಿಲಿಯಮ್ಸನ್ – 189 ರನ್


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search