ದುಬೈ: ಇಂದು ( ಮಾರ್ಚ್ 9 ) ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ 2025 ಚಾಂಪಿಯನ್ಸ್ ಟ್ರೋಫಿ ನಡೆಯ ಫೈನಲ್ ಪಂದ್ಯ ನಡೆಯಲಿದೆ. ಟ್ರೋಫಿಯ ಈ ಅಂತಿಮ ಹಣಾಹಣಿಯಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಟ್ರೋಫಿಗಾಗಿ ಸೆಣಸಾಡಲಿವೆ.
ಇನ್ನು ಈ ಪಂದ್ಯದಲ್ಲಿ ಯಾವ ತಂಡ ಗೆದ್ದು ಟ್ರೋಫಿ ಎತ್ತಿಹಿಡಿಯಲಿದೆ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿ ನಡೆಯುತ್ತಿದ್ದು, ಎರಡೂ ತಂಡಗಳ ಹಿಂದಿನ ಹಣಾಹಣಿ ಹಾಗೂ ಅವುಗಳ ಫಲಿತಾಂಶಗಳು ವೈರಲ್ ಆಗಿವೆ.
ಭಾರತ ಹಾಗೂ ನ್ಯೂಜಿಲೆಂಡ್ ಐಸಿಸಿ ಟೂರ್ನಿಗಳಲ್ಲಿ ಇಲ್ಲಿಯವರೆಗೂ ಒಟ್ಟು 2 ಬಾರಿ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಹಾಗೂ ಈ ಎರಡೂ ಪಂದ್ಯಗಳಲ್ಲಿಯೂ ಭಾರತ ತಂಡ ಸೋಲನ್ನು ಅನುಭವಿಸಿದೆ.
ಹೌದು, ನ್ಯೂಜಿಲೆಂಡ್ ಇಲ್ಲಿಯವರೆಗೂ ಒಟ್ಟು ಕೇವಲ ಎರಡು ಬಾರಿ ಮಾತ್ರ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದು, ಈ ಎರಡು ಬಾರಿಯೂ ಭಾರತವೇ ನ್ಯೂಜಿಲೆಂಡ್‌ಗೆ ಎದುರಾಳಿಯಾಗಿತ್ತು. ಈ ಮೂಲಕ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭಾರತದ ವಿರುದ್ಧ 2-0 ಅಂತರದ ಮುನ್ನಡೆ ಸಾಧಿಸಿದೆ.
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ನಡೆದ ಐಸಿಸಿ ಫೈನಲ್ ಪಂದ್ಯಗಳು
2000ದಲ್ಲಿ ನಡೆದಿದ್ದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಇತ್ತಂಡಗಳು ಮುಖಾಮುಖಿಯಾಗಿದ್ದಾಗ ಭಾರತ ಸೋತಿತ್ತು.
2021ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಸಹ ನ್ಯೂಜಿಲೆಂಡ್ ವಿರುದ್ಧ ಭಾರತ ಪರಾಭವಗೊಂಡಿತ್ತು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


