ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯ ಸದ್ಯ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಿ 50 ಒವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಕಲೆಹಾಕಿರುವ ನ್ಯೂಜಿಲೆಂಡ್ ಭಾರತಕ್ಕೆ 252 ರನ್ಗಳ ಗುರಿಯನ್ನು ನೀಡಿದೆ.
ಈ ಗುರಿಯನ್ನು ಬೆನ್ನಟ್ಟಲು ಮುಂದಾದ ಭಾರತದ ಪರ ಆರಂಭಿಕ ಆಟಗಾರರಾದ ಶುಬ್ಮನ್ ಗಿಲ್ 31 ಹಾಗೂ ರೋಹಿತ್ ಶರ್ಮಾ 76 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿದರು. ಇನ್ನು ಗಿಲ್ ಹಾಗೂ ಕೊಹ್ಲಿ ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿದ ಸಂದರ್ಭದಲ್ಲಿ ಕಣಕ್ಕಿಳಿದ ಶ್ರೇಯಸ್ ಐಯ್ಯರ್ 62 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 48 ರನ್ ಬಾರಿಸಿದರು.
ಈ ಮೂಲಕ ಶ್ರೇಯಸ್ ಐಯ್ಯರ್ ತಂಡ ಕಷ್ಟದಲ್ಲಿದ್ದ ಸಂದರ್ಭದಲ್ಲಿ ಅತ್ಯುತ್ತಮ ಆಟವನ್ನಾಡಿದ್ದಾರೆ. ಇನ್ನು ಶ್ರೇಯಸ್ ಐಯ್ಯರ್ ವಿಕೆಟ್ ಒಪ್ಪಿಸುವ ಮುನ್ನ ಜೀವದಾನ ಪಡೆದಿದ್ದರು. ಪಂದ್ಯದ 37ನೇ ಓವರ್ನಲ್ಲಿ ಗ್ಲೆನ್ ಫಿಲಿಪ್ಸ್ ಎಸೆದ ನಾಲ್ಕನೇ ಎಸೆತದಲ್ಲಿ ಶ್ರೇಯಸ್ ಐಯ್ಯರ್ ಜೆಮಿಸನ್ಗೆ ಕ್ಯಾಚ್ ನೀಡಿದ್ದರು. ಆದರೆ ಜೆಮಿಸನ್ ಆ ಕ್ಯಾಚ್ ಬಿಟ್ಟರು.
ಹೀಗೆ ಜೆಮಿಸನ್ ಶ್ರೇಯಸ್ ಐಯ್ಯರ್ ಕ್ಯಾಚ್ ಬಿಟ್ಟ ಕೂಡಲೇ ಐಸಿಸಿ ಅಧ್ಯಕ್ಷ ಜಯ್ ಶಾ ಗ್ಯಾಲರಿಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಜಯ್ ಶಾ ಅವರ ಈ ಫೋಟೊ ಹಾಗೂ ವಿಡಿಯೊಗಳು ವೈರಲ್ ಆಗಿವೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


