ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಶಿವಶ್ರೀ ಸ್ಕಂದ ನವದಂಪತಿಗೆ ಸಿಎಂ, ಡಿಸಿಎಂ ಸೇರಿದಂತೆ ಅನೇಕ ಗಣ್ಯರು ಶುಭಹಾರೈಸಿದ್ದಾರೆ.
ಸಚಿವ ಜಮೀರ್ ಅಹ್ಮದ್ ಖಾನ್ ಸಹ ಈ ಕಾರ್ಯಕ್ರಮಕ್ಕೆ ಆಗಮಿಸಿ ನವ ವಧು – ವರರಿಗೆ ಶುಭ ಹಾರೈಸಿದ್ದಾರೆ. ಈ ಮೂಲಕ ರಾಜಕೀಯದಲ್ಲಿ ಯಾರೂ ವೈರಿಗಳಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಇನ್ನು ತೇಜಸ್ವಿ ಸೂರ್ಯ ಆರತಕ್ಷತೆಗೆ ಜಮೀರ್ ಆಗಮಿಸಿದ ಫೋಟೊವನ್ನು ಹಂಚಿಕೊಳ್ಳುತ್ತಿರುವ ನೆಟ್ಟಿಗರು ನಿರೀಕ್ಷೆಯಂತೆ ಜಮೀರ್ ಅವರ ಡೈಲಾಗ್‌ಗಳನ್ನು ಬರೆದುಕೊಂಡಿದ್ದಾರೆ.
ಇಂದು ನಗರದ ಅರಮನೆ ಮೈದಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಜೋಡಿಯ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಈ ಸಂಭ್ರಮದಲ್ಲಿ ಸಿಎಂ, ಡಿಸಿಎಂ, ಸಚಿವರು, ರಾಜಕೀಯ ಪಕ್ಷಗಳ ಮುಖಂಡರು, ಆಪ್ತರು ಆಗಮಿಸಿ ಜೋಡಿಗೆ ಆಶೀರ್ವಾದಿಸಿದರು.
ಮಾರ್ಚ್ 5 ಮತ್ತು 6 ರಂದು ತೇಜಸ್ವಿ ಸೂರ್ಯ ವಿವಾಹ ಸಮಾರಂಭ ಬೆಂಗಳೂರು ಕನಕಪುರ ರೆಸಾರ್ಟ್‌ನಲ್ಲಿ ನಡೆದಿತ್ತು. ಇದಕ್ಕೆ ಕುಟುಂಬ ಸದಸ್ಯರು, ಆಪ್ತ ವಲಯದ ಸ್ನೇಹಿತರು, ರಾಜಕೀಯ ಗಣ್ಯರು ಸಾಕ್ಷಿಯಾಗಿದ್ದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


