ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಗಲಕೋಟೆ ಅವರು ಅಧಿಕೃತ ಅಧಿಸೂಚನೆಯ ಮೂಲಕ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಹುದ್ದೆ ಭರ್ತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಕರ್ನಾಟಕ ಸರ್ಕಾರದ ಬಾಗಲಕೋಟೆ ಜಿಲ್ಲೆಯಲ್ಲಿ ವೃತ್ತಿಜೀವನ ನಿರ್ಮಿಸಿಕೊಳ್ಳಲು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದ್ಭಳಕೆ ಮಾಡಿಕೊಂಡು ಮೇ 23ರೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆಫ್ಲೈನ್ ಆಗಿದ್ದು, ಆಯ್ಕೆಯು ನೇಮಕಾತಿ ವಿಧಾನ ಪ್ರಕಾರ ನಡೆಯಲಿದೆ.
WCD ಬಾಗಲಕೋಟೆ ಹುದ್ದೆಯ ಅಧಿಸೂಚನೆ:
ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆ
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಬಾಗಲಕೋಟೆ
ಹುದ್ದೆಯ ಹೆಸರು: ಜಿಲ್ಲಾ ಕಾರ್ಯಕ್ರಮ ಸಂಯೋಜಕರು
ಸಂಬಳ: ತಿಂಗಳಿಗೆ ರೂ. 19,223/-
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 23-05-2025
ವಿದ್ಯಾರ್ಹತೆ ವಿವರ
ಯಾವುದಾದರು ಪದವಿ ಮತ್ತು ಕಂಪ್ಯೂಟರ್ ಜ್ಞಾನದೊಂದಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳ ಯಾವುದಾದರೂ ಒಂದು ಕಲಾ ಕ್ಷೇತ್ರಗಳಲ್ಲಿ ಕೌಶಲ್ಯ ಹೊಂದಿರಬೇಕು. ಬಾಲಭವನದಲ್ಲಿ ಕನಿಷ್ಠ ಐದು ವರ್ಷಗಳಿಗೂ ಮೇಲ್ಪಟ್ಟು ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರುವವರಿಗೆ ಆಧ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ ದೃಢೀಕೃತ ದಾಖಲೆಗಳೊಂದಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ- 209, ಜಿಲ್ಲಾಡಳಿತ ಕಟ್ಟಡ, ನವನಗರ, ಬಾಗಲಕೋಟೆ- 587103 ಗೆ ಕಳುಹಿಸಬೇಕು.
ಬಾಗಲಕೋಟೆ ಜಿಲ್ಲೆಯ ಜಿಲ್ಲಾಡಳಿತದ ಅಧಿಕೃತ ವೆಬ್ಸೈಟ್ ವಿಳಾಸ bagalkot.nic.in ಗೆ ಭೇಟಿ ನೀಡಿ.
ಓಪನ್ ಆದ ಪೇಜ್ನಲ್ಲಿ ಬಾಲಭವನದ ಸಂಯೋಜಕರು ಹುದ್ದೆಯ ಅಧಿಸೂಚನೆ ಲಿಂಕ್ ಕ್ಲಿಕ್ ಮಾಡಿ.
ಓಪನ್ ಆದ ಅಧಿಸೂಚನೆಯಲ್ಲಿ ಅರ್ಜಿ ನಮೂನೆಯನ್ನು ನೀಡಲಾಗಿದೆ.
ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.
ಅರ್ಜಿ ನಮೂನೆಯನ್ನು ಸೂಕ್ತ ಮಾಹಿತಿಗಳನ್ನು ನೀಡಿ ಭರ್ತಿ ಮಾಡಿ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


