Wednesday, November 11, 2026
spot_img
More
    spot_img
    HomeSportsCricketಐಪಿಎಲ್‌ 2025 ರದ್ದಾದ ಬಳಿಕ ವಿರಾಟ್‌ ಕೊಹ್ಲಿ ಮೊದಲ ಪ್ರತಿಕ್ರಿಯೆ

    ಐಪಿಎಲ್‌ 2025 ರದ್ದಾದ ಬಳಿಕ ವಿರಾಟ್‌ ಕೊಹ್ಲಿ ಮೊದಲ ಪ್ರತಿಕ್ರಿಯೆ

    ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಮಧ್ಯೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಭಾರತೀಯ ಸೇನೆಗೆ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಪರಿಸ್ಥಿತಿ ಹದಗೆಟ್ಟ ಪರಿಣಾಮ ಪ್ರಸಕ್ತ ಸಾಲಿನ ಐಪಿಎಲ್‌ ರದ್ದಾದ ಬಳಿಕ ಕೊಹ್ಲಿ ನೀಡಿರುವ ಪ್ರತಿಕ್ರಿಯೆ ಇದಾಗಿದೆ.

    ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಂಡಿರುವ ಕೊಹ್ಲಿ, ದೇಶದ ರಕ್ಷಣೆಗಾಗಿ ಹೋರಾಡುತ್ತಿರುವ ಸೇನೆಯನ್ನು ಶ್ಲಾಘಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಪತ್ನಿ, ನಟಿ ಅನುಷ್ಕಾ ಶರ್ಮಾ ಅವರ ಪೋಸ್ಟ್‌ಗೆ ಕಾಮೆಂಟ್ ಮಾಡಿರುವ ಕೊಹ್ಲಿ, “ಜೈ ಹಿಂದ್” ಎಂದು ಬರೆದು ತಮ್ಮ ದೇಶಪ್ರೇಮವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

    ಕೊಹ್ಲಿ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, “ಈ ಕಠಿಣ ಸಮಯದಲ್ಲಿ ನಮ್ಮ ದೇಶವನ್ನು ರಕ್ಷಿಸುತ್ತಿರುವ ಭಾರತೀಯ ಸೇನೆಗೆ ನಾವು ಒಗ್ಗಟ್ಟಿನಿಂದ ಬೆಂಬಲ ಸೂಚಿಸುತ್ತೇವೆ. ನಮ್ಮ ಯೋಧರ ಧೈರ್ಯ ಮತ್ತು ತ್ಯಾಗಕ್ಕೆ ನಾವು ಶಾಶ್ವತವಾಗಿ ಋಣಿಯಾಗಿರುತ್ತೇವೆ. ಅವರ ಮತ್ತು ಅವರ ಕುಟುಂಬದವರ ತ್ಯಾಗವು ನಮ್ಮ ದೇಶವನ್ನು ಮಹಾನ್ ಮಾಡಿದೆ. ಜೈ ಹಿಂದ್!” ಎಂದು ಬರೆದಿದ್ದಾರೆ.

    ಈ ಮೂಲಕ ಕ್ರಿಕೆಟ್‌ಗಿಂತ ದೇಶ ದೊಡ್ಡದು ಎಂಬ ಸಂದೇಶವನ್ನು ವಿರಾಟ್‌ ಕೊಹ್ಲಿ ಸಾರಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search