Saturday, May 30, 2026
spot_img
More
    spot_img
    HomeCrimeಬೆಂಗಳೂರು: ಶಾಪಿಂಗ್‌ ಹೋಗಿಬಂದ ಹೆಂಡತಿ ಕುತ್ತಿಗೆ ತುಳಿದು ಕೊಲೆಗೈದ ಪತಿ!

    ಬೆಂಗಳೂರು: ಶಾಪಿಂಗ್‌ ಹೋಗಿಬಂದ ಹೆಂಡತಿ ಕುತ್ತಿಗೆ ತುಳಿದು ಕೊಲೆಗೈದ ಪತಿ!

    ಬೆಂಗಳೂರು: ನಗರದ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತಿ ತನ್ನ ಪತ್ನಿಯ ಕುತ್ತಿಗೆ ಮೇಲೆ ಕಾಲಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ.

    Advertisement

    ಹರೀಶ್‌ ಎಂಬಾತ ತನ್ನ ಪತ್ನಿ ಪದ್ಮಜಾಳ ಜತೆ ಜಗಳ ಮಾಡಿ ಕೋಪದಲ್ಲಿ ಆಕೆಯನ್ನು ನೆಲಕ್ಕೆ ಬೀಳಿಸಿ, ಬಳಿಕ ಕುತ್ತಿಗೆ ಮೇಲೆ ಕಾಲಿಟ್ಟು ದಾರುಣವಾಗಿ ಕೊಲೆ ಮಾಡಿದ್ದಾನೆ.

    ಇನ್ನು ಇಬ್ಬರೂ ಕೋಲಾರದ ಶ್ರೀನಿವಾಸಪುರ ಮೂಲದವರಾಗಿದ್ದು, ಬಿಇ ಮಾಡಿ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಹರೀಶ್‌ ಕೆಲ ದಿನಗಳಿಂದ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದು, ನಿನ್ನೆ ( ಜುಲೈ 8 ) ಪತ್ನಿ ಶಾಪಿಂಗ್‌ ಮುಗಿಸಿ ತಡವಾಗಿ ಮನೆಗೆ ಬಂದ ಕಾರಣ ಜಗಳ ತೆಗೆದಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ದುರಂತ ಸಂಭವಿಸಿದೆ.

    ಸ್ಥಳೀಯರು ಇಬ್ಬರ ನಡುವೆ ಆಗಾಗ ಜಗಳಗಳು ನಡೆಯುತ್ತಲೇ ಇದ್ದವು ಎಂದು ಹೇಳಲಾಗಿದ್ದು, ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

    ರಾಜ್ಯಕ್ಕೆ ತಟ್ಟದ ಭಾರತ್‌ ಬಂದ್‌ ಬಿಸಿ; ಬ್ಯಾಂಕಿಂಗ್‌ ಸೇವೆ ಇದೆಯಾ, ಇಲ್ವಾ?

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಕಾಕ್ರೋಚ್ ಜನತಾ ಪಾರ್ಟಿ: ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದ ವೈರಲ್ ಟ್ರೆಂಡ್!

    ಕಾಕ್ರೋಚ್ ಜನತಾ ಪಾರ್ಟಿ ಎಂಬ ಪದ ಸಾಮಾಜಿಕ ಜಾಲತಾಣದಲ್ಲಿ ಯಾವಾಗ, ಹೇಗೆ ವೈರಲ್ ಆಯಿತು? ಈ ಟ್ರೆಂಡ್ ಹಿಂದಿನ ಸಂಪೂರ್ಣ ಕಥೆ ಓದಿ.

    ಬೆಂಗಳೂರಿನಲ್ಲಿ ಮುಂಗಾರು ಆರ್ಭಟ: ಆಲಿಕಲ್ಲು ಮಳೆ, ಗುಡುಗು-ಸಿಡಿಲಿಗೆ ನಗರ ತತ್ತರ

    ಬೆಂಗಳೂರು: ಸಂಜೆ ಐಟಿ ರಾಜಧಾನಿ ಬೆಂಗಳೂರಿನ ಮೇಲೆ ಪ್ರಕೃತಿ ತನ್ನ ಕೋಪವನ್ನು ಸಂಪೂರ್ಣವಾಗಿ ತೋರಿಸಿತು. ಕಾರ್ಮೋಡ ಕವಿದ ಆಕಾಶದಿಂದ ಮೊದಲು ಗುಡುಗು-ಸಿಡಿಲಿನ ಆರ್ಭಟ, ಬಳಿಕ ಆಲಿಕಲ್ಲು ಮಳೆ ಮತ್ತು ಜೋರು ಗಾಳಿ ನಗರವನ್ನು...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading