ಕೊಪ್ಪಳದಲ್ಲಿ ಪ್ರೌಢಶಾಲೆಯೊಂದರ ಉದ್ಘಾಟನೆಗೆ ತೆರಳಿದ್ದ ರಾಜ್ಯದ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿಗೆ ರೈತರೊಬ್ಬರು ತಮ್ಮ ಜಮೀನಿಗೆ ಹೋಗುವ ರಸ್ತೆ ನಿರ್ಮಿಸಿಕೊಡಿ ಎಂದು ಮನವಿ ಮಾಡಿಕೊಂಡಿದ್ದರು.
ಈ ಮನವಿಗೆ ಸ್ಪಂದಿಸಿದ್ದ ಬಸವರಾಜ ರಾಯರೆಡ್ಡಿ ರಸ್ತೆ ನಿರ್ಮಿಸಬೇಕೆಂದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಈಗಾಗಲೇ ರಾಜ್ಯ ಸರ್ಕಾರದ ಬಳಿ ಹಣವಿಲ್ಲ, ಬಿಕಾರಿಯಾಗಿದೆ ಎಂದು ಟೀಕೆಗಳನ್ನು ಎದುರಿಸುತ್ತಿರುವ ಕಾಂಗ್ರೆಸ್ಗೆ ಭಾರೀ ಮುಖಭಂಗವನ್ನು ಉಂಟುಮಾಡಿದೆ.
ಈ ಹೇಳಿಕೆ ವಿರುದ್ಧ ಸದ್ಯ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕಿಡಿಕಾರಿದ್ದು, ಬಸವರಾಜ ರಾಯರೆಡ್ಡಿ ಅವರಿಗೆ ಸರ್ಕಾರಕ್ಕೆ ಮುಜುಗರ ಉಂಟಾಗುವಂತಹ ಹೇಳಿಕೆಗಳನ್ನು ನೀಡದಂತೆ ತಾಕೀತು ಮಾಡಿದ್ದಾರೆ. ಈ ಕುರಿತು ತೀರ ಅಸಮಾಧಾನಕ್ಕೊಳಗಾದ ಸುರ್ಜೇವಾಲ ರಾಯರೆಡ್ಡಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇನ್ನು ಸುರ್ಜೇವಾಲ ಅವರ ಸೂಚನೆಗೆ ಸಮ್ಮತಿ ವ್ಯಕ್ತಪಡಿಸಿದ ಬಸವರಾಜ ರಾಯರೆಡ್ಡಿ ಇನ್ನುಮುಂದೆ ಪಕ್ಷಕ್ಕೆ ಮುಜುಗರ ತರುವ ಹೇಳಿಕೆಗಳನ್ನು ನೀಡುವುದಿಲ್ಲ ಎಂದಿದ್ದಾರೆ.
ಪರಪ್ಪನ ಅಗ್ರಹಾರ ಎಎಸ್ಐ ಸೇರಿ ಕರ್ನಾಟಕದಲ್ಲಿ ಮೂವರು ಶಂಕಿತ ಉಗ್ರರ ಅರೆಸ್ಟ್!
ಕೃಷಿ ಕನ್ನಡ ಎಐ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


