ಬೆಂಗಳೂರು: ಡಿಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಹಲವರಿಂದ ಹಣ ಹಾಗೂ ಚಿನ್ನ ಪಡೆದು ವಂಚನೆ ಮಾಡಿದ್ದ ಐಶ್ವರ್ಯಾ ಗೌಡ ಪ್ರಕರಣಕ್ಕೆ ಸದ್ಯ ಟ್ವಿಸ್ಟ್ ಸಿಕ್ಕಿದ್ದು, ಈಕೆ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಲು ತೀರ್ಮಾನಿಸಿದ್ದಳು ಎಂಬ ಮಾಹಿತಿ ಇಡಿ ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ.
ಫಿಲ್ಮ್ ಚೇಂಬರ್‌ನಲ್ಲಿ ಐಶ್ವರ್ಯಾ ಗೌಡ ಎಸ್‌ಎಲ್‌ವಿ ಪ್ರೊಡಕ್ಷನ್ಸ್ ಎಂಬ ಹೆಸರಿನಡಿಯಲ್ಲಿ ಸಂಸ್ಥೆಯೊಂದನ್ನು ಸ್ಥಾಪಿಸಿದ್ದು, ಇದರ ಅಡಿಯಲ್ಲಿ ಚಿತ್ರಗಳನ್ನು ನಿರ್ಮಿಸುವ ಯೋಜನೆಯನ್ನು ಹೊಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಮಾಹಿತಿಯನ್ನು ಕೇಳಿ ವಾಣಿಜ್ಯ ಮಂಡಳಿಗೆ ಸಿಐಡಿ ಡಿವೈಎಸ್‌ಪಿ ಪತ್ರವನ್ನು ಬರೆದಿದ್ದಾರೆ ಎನ್ನಲಾಗಿದೆ.
ಇನ್ನು ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಐಶ್ವರ್ಯಾ ಗೌಡ ವಿರುದ್ಧ ಸ್ವತಃ ದೂರು ನೀಡಿದ್ದ ಮಾಜಿ ಸಂಸದ ಡಿಕೆ ಸುರೇಶ್ ಸಹ ಇಡಿ ವಿಚಾರಣೆಗೆ ಹಾಜರಾಗಿದ್ದು, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದ್ದಾರೆ.
ಬಿಗಿ ಭದ್ರತೆ ನಡುವೆ ಅಮರನಾಥ ಗುಹಾ ದೇವಾಲಯಕ್ಕೆ ಇಂದು 7500ಕ್ಕೂ ಹೆಚ್ಚು ಯಾತ್ರಿಕರ ಪ್ರಯಾಣ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


