ಮೈಸೂರು: ಕೇಂದ್ರದ ಕಾರ್ಮಿಕ ವಿರೋಧಿ ಕ್ರಮಗಳು ಹಾಗೂ ಕಾರ್ಪೋರೇಟ್ ಪರ ನಿಲುವು ಖಂಡಿಸಿ ಇಂದು ಭಾರತ್ ಬಂದ್‌ಗೆ 10ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿದ್ದು, ಬ್ಯಾಂಕಿಂಗ್ ಸೇವೆಯಲ್ಲಿ ಕೊಂಚ ವ್ಯತ್ಯಯ ಉಂಟಾಗಿದೆ.
ಬ್ಯಾಂಕಿಂಗ್, ಇನ್ಯುರೆನ್ಸ್, ಪೋಸ್ಟ್, ಗಣಿ, ಹೆದ್ದಾರಿ ಕಾರ್ಮಿಕರು ಸೇರಿದಂತೆ 25 ಕೋಟಿಗೂ ಅಧಿಕ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರು ಬಂದ್‌ನಲ್ಲಿ ಭಾಗಿಯಾಗಿದ್ದು, ಜನಜೀವನ ಮಾತ್ರ ಎಂದಿನಂತಿದೆ.
ಆದರೆ ರಾಜ್ಯಕ್ಕೆ ಭಾರತ್ ಬಂದ್ ಬಿಸಿ ಸ್ವಲ್ಪವೂ ತಟ್ಟದೇ ಜನಜೀವನ ಎಂದಿನಂತೆ ಇದೆ. ಆದರೆ ಬ್ಯಾಂಕಿಂಗ್ ಸೇವೆಯಲ್ಲಿ ಸ್ವಲ್ಪ ವ್ಯತ್ಯಯವಾಗಿದೆ.
ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಕೊಡಗು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಎಂದಿನಂತೆ ಜನಜೀವನ ಇದ್ದು, ಯಾವುದೇ ಬಂದ್ ಬಿಸಿ ತಟ್ಟಿಲ್ಲ. ಮೈಸೂರು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಎಂದಿನಂತೆ ಬಸ್‌ಗಳ ಸಂಚಾರವಿದ್ದು, ಪ್ರಯಾಣಿಕರು ನಿಲ್ದಾಣದಲ್ಲಿ ತುಂಬಿ ತುಳುಕಿದ್ದಾರೆ. ಮೈಸೂರಿನಿಂದ ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಗಳಿಗೆ ಸಾಲು ಸಾಲಾಗಿ ಬಸ್‌ಗಳು ಸಂಚಾರ ಮಾಡುತ್ತಿದ್ದು, ನೆಮ್ಮದಿಯಿಂದ ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ.
ಇನ್ನು ಮೈಸೂರಿನ ಕೆ.ಆರ್.ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆ, ಜಯದೇವ ಆಸ್ಪತ್ರೆ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದು, ರೋಗಿಗಳು ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ.
ಮೈಸೂರು ನಗರ ಬಸ್ ನಿಲ್ದಾಣದಲ್ಲೂ ಎಂದಿನಂತೆ ಬಸ್‌ಗಳು ಸಂಚಾರ ಮಾಡುತ್ತಿದ್ದು, ಜನರು ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿದ್ದಾರೆ. ಮೈಸೂರು ಸೇರಿದಂತೆ ರಾಜ್ಯದಲ್ಲಿ ಭಾರತ್ ಬಂದ್ ಕೇವಲ ಪ್ರತಿಭಟನೆಗಷ್ಟೇ ಸೀಮಿತವಾಗಿದ್ದು, ಜನಜೀವನ ಎಂದಿನಂತಿದೆ.
ಇನ್ನು ಅಂಚೆ ಕಚೇರಿಗಳು ಕೂಡ ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದು, ಕೆಲ ಬ್ಯಾಂಕ್‌ಗಳಷ್ಟೇ ಇಂದು ಕ್ಲೋಸ್ ಆಗಿವೆ.
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
ಫಾಲೋವರ್ಸ್ ಎಕ್ಸ್‌ಪ್ಲೋಡ್ ಮಾಡ್ಬೇಕಾ? ಈ ಇನ್‌ಸ್ಟಾಗ್ರಾಮ್ ಟ್ರಿಕ್ಸ್ ಮಿಸ್ ಮಾಡ್ಬೇಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


