Monday, August 31, 2026
spot_img
More
    spot_img
    HomeLatest newsಮುಂದಿನ ಶೈಕ್ಷಣಿಕ ವರ್ಷದಿಂದ ಪಠ್ಯ ಪುಸ್ತಕಗಳಲ್ಲಿ ಹೃದಯದ ಪಾಠ; ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

    ಮುಂದಿನ ಶೈಕ್ಷಣಿಕ ವರ್ಷದಿಂದ ಪಠ್ಯ ಪುಸ್ತಕಗಳಲ್ಲಿ ಹೃದಯದ ಪಾಠ; ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

    ಬೆಂಗಳೂರು: ಮುಂದಿನ ವರ್ಷದಿಂದ ಪಠ್ಯ ಪುಸ್ತಕಗಳಲ್ಲಿ ಹೃದಯಘಾತದ ಕುರಿತಾದ ವಿಚಾರ ಅಳವಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

    Advertisement

    ಯುವ ಜನತೆಯಲ್ಲಿ ಹೃದಯಾಘಾತ ಹಾಗೂ ಹಠಾತ್‌ ಸಾವು ಸಂಭವಿಸುತ್ತಿರುವ ಕಾರಣ ಮುಂದಿನ ಶೈಕ್ಷಣಿಕ ವರ್ಷದಿಂದ ಹೃದಯಾಘಾತ ಹಾಗೂ ಹೃದಯದ ಆರೋಗ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ವಿಚಾರವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಲು ಚಿಂತನೆ ನಡೆದಿದೆ.

    ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಕೈಗೊಳ್ಳಲಿರುವ ಎಲ್ಲಾ ಕ್ರಮಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

    ಇನ್ನು ರಾಜ್ಯದಲ್ಲಿ ಸಂಭವಿಸುವ ಹಠಾತ್‌ ಸಾವನ್ನು ಇನ್ನು ಮುಂದೆ ಅಧಿಸೂಚಿತ ಕಾಯಿಲೆ ಎಂದು ಪರಿಗಣಿಸಲು ಹಾಗೂ ಆಸ್ಪತ್ರೆಯಿಂದ ಹೊರಗೆ ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

    ಕಾನೂನಿನ ಪ್ರಕಾರ ಸರ್ಕಾರಕ್ಕೆ ವರದಿ ಮಾಡಬೇಕಾದ ಕಾಯಿಲೆಯನ್ನು ಅಧಿಸೂಚಿತ ಕಾಯಿಲೆ ಎಂದು ಕರೆಯಲಾಗುತ್ತದೆ. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳು ಶಂಕಿತ ಮತ್ತು ದೃಢಪಟ್ಟ ಪ್ರಕರಣಗಳನ್ನು ಆರೋಗ್ಯ ಇಲಾಖೆಗೆ ಕಡ್ಡಾಯವಾಗಿ ವರದಿ ಮಾಡಬೇಕು ಎಂದು ಸರ್ಕಾರ ತಿಳಿಸಿದೆ.

    ಲೈಂಗಿಕ ಕಿರುಕುಳ ಕೇಸ್:‌ ಆರ್‌ಸಿಬಿ ಆಟಗಾರ ಯಶ್‌ ದಯಾಳ್‌ಗೆ ಬಂಧನದ ಭೀತಿ!

    ಎಐ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading