ಬೆಂಗಳೂರು: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರನ್ನು 6 ದಿನ ಎನ್‌ಐಎ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಉಗ್ರ ಟಿ ನಾಸಿರ್‌ಗೆ ನೆರವು ನೀಡಿದ ಆರೋಪದ ಮೇರೆಗೆ ಇಂದು ಎನ್‌ಐಎ ಬೆಂಗಳೂರು ಸೇರಿ 5 ಕಡೆ ದಾಳಿ ನಡೆಸಿ ಮೂವರನ್ನು ಬಂಧಿಸಿತ್ತು.
ಬಂಧಿತರನ್ನು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್‌ಐಎ ಕೋರ್ಟ್‌ಗೆ ಹಾಜರುಪಡಿಸಿತ್ತು. ವಿಚಾರಣೆ ನಡೆಸಿದ ಕೋರ್ಟ್ ಅವರನ್ನು ಆರು ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ ಮತ್ತು ನೆರವು ನೀಡಿದ ಆರೋಪದಡಿ ಕೋಲಾರ ಮತ್ತು ಬೆಂಗಳೂರು ನಗರ ಜಿಲ್ಲೆಯ ಐದು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದರು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋವೈದ್ಯ ಡಾ.ನಾಗರಾಜು, ಉತ್ತರ ವಿಭಾಗದ ನಗರ ಶಸಸ್ತ್ರ ಮೀಸಲು ಪಡೆ ಎಎಸ್‌ಐ ಚಾಂದ್ ಪಾಷಾ ಹಾಗೂ ತಲೆಮರೆಸಿಕೊಂಡಿರುವ ಶಂಕಿತ ಉಗ್ರ ಜುನೈದ್ ಅಹಮ್ಮದ್ ತಾಯಿ ಅನೀಸ್ ಫಾತಿಮಾ ಅವರನ್ನು ಬಂಧಿಸಲಾಗಿದೆ.
ಉಗ್ರ ಚಟುವಟಿಕೆಗೆ ಸಂಬಂಧಿಸಿದಂತೆ ಹಣ, ಚಿನ್ನಾಭರಣಮ ಎರಡು ವಾಕಿ ಟಾಕಿ ಸೇರಿದಂತೆ ಇತರೆ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು ಶೇಷಾದ್ರಿಪುರಂನಲ್ಲಿ ಇಂಟೀರಿಯರ್ ಡಿಸೈನರ್/ಆರ್ಕಿಟೆಕ್ಟ್ ಹುದ್ದೆಗೆ ಅರ್ಜಿ ಆಹ್ವಾನ
ಕೃಷಿ ಕನ್ನಡ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


