ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಉಗ್ರರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಸೈನಿಕರು ಹಗಲು- ರಾತ್ರಿ ಉಗ್ರರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, 9 ಮಂದಿ ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಕಳೆದ ಏಳು ದಿನಗಳಲ್ಲಿ ಗಾಯಗೊಂಡ ಸೇನಾ ಸಿಬ್ಬಂದಿಗಳ ಒಟ್ಟು ಸಂಖ್ಯೆ ಒಂಬತ್ತಕ್ಕೆ ತಲುಪಿದೆ. ಭಾರತೀಯ ಸೇನೆ, ಪೊಲೀಸ್ ಮತ್ತು ಕೇಂದ್ರ ಮೀಸಲು ಪಡೆಯ ಜಂಟಿ ಪಡೆಗಳು ಉಗ್ರರ ಸಂಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಆಗಸ್ಟ್ 1ರಿಂದ ಈ ಗುಂಡಿನ ದಾಳಿ ಶುರುವಾಗಿದ್ದು, ಇಂದು ಒಂಬತ್ತನೇ ದಿನ ಕಾರ್ಯಚರಣೆ ನಡೆದಿದೆ ಎಂದು ಸೇನೆ ಹೇಳಿದೆ. ಇದು ಕಣಿವೆಯಲ್ಲಿ ನಡೆದ ಅತಿ ಮಟ್ಟದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳಲ್ಲಿ ಒಂದಾಗಿದೆ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.
ದಟ್ಟ ಅರಣ್ಯ ಹಾಗೂ ಬಿಕ್ಕಟ್ಟಿನ ಭೂಪ್ರದೇಶದ ನಡುವೆಯೇ ಭದ್ರತಾ ಪಡೆಗಳು ಮುನ್ನೆಚ್ಚರಿಕೆಯಿಂದ ಕಾರ್ಯಾಚರಣೆ ನಡೆಸುತ್ತಿವೆ.ಅರಣ್ಯ ಪ್ರದೇಶದ ದುರ್ಗಮ ಸ್ಥಳಗಳಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಡ್ರೋನ್ ಹಾಗೂ ಹೆಲಿಕಾಪ್ಟರ್‌ಗಳು ಸೇರಿದಂತೆ ಎಲ್ಲ ವಿಧಾನಗಳನ್ನೂ ಬಳಸುತ್ತಿವೆ.
ಇದರಿಂದ ಸ್ಥಳೀಯರು ತೊಂದರೆ ಅನುಭವಿಸುತ್ತಿದ್ದು, ತಮ್ಮನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ. ರಾತ್ರಿಯಿಡೀ ಕೇಳಿಸುವ ಗುಂಡಿನ ಸದ್ದಿನ ಪರಿಣಾಮ ಆತಂಕದಿಂದ ಸಮಯಕಳೆಯುವಂತಾಗಿದೆ. ರಾತ್ರಿ ಸರಿಯಾಗಿ ನಿದ್ದೆಯನ್ನೂ ಮಾಡಲಾಗುತ್ತಿಲ್ಲ, ಇದರ ಜತೆಗೆ ನಮಗೆ ಆಹಾರ ಕೊರತೆಯೂ ಕಾಡುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ನಾಗರಿಕರ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ತುರ್ತು ಸಂಪರ್ಕದ ಸಲುವಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಸ್ಥಳೀಯರಿಗಾಗಿ ಸಹಾಯವಾಣಿ ಸಂಖ್ಯೆಗಳನ್ನು ತೆರೆಯಲಾಗಿದೆ.
,ಕಪಿಲ್ ಶರ್ಮಾ ಕೆಫೆ ಮೇಲೆ ಗುಂಡಿನ ದಾಳಿ ! ಫೈಯರಿಂಗ್ ಮಾಡಿದ್ದು ಯಾರು ?
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


