ಭಾರತಕ್ಕೆ ಬೇಕಿದ್ದ ಮೋಸ್ಟ್ ವಾಂಟೆಡ್ ಶಸ್ತ್ರಾಸ್ತ್ರ ಪೂರೈಕೆದಾರ ಸಲೀಂ ಅಲಿಯಾಸ್ ಸಲೀಂ ಪಿಸ್ತೂಲ್‌ನನ್ನು (Salim Pistol) ನೇಪಾಳದಲ್ಲಿ ಬಂಧಿಸಲಾಗಿದೆ.ದೆಹಲಿ ಪೊಲೀಸ್ ವಿಶೇಷ ಘಟಕ ಮತ್ತು ಭದ್ರತಾ ಸಂಸ್ಥೆಗಳ ತಂಡ ಪ್ರಮುಖ ಕಾರ್ಯಾಚರಣೆಯಲ್ಲಿ ಆತನನ್ನು ಸೆರೆ ಹಿಡಿಯಲಾಗಿದೆ.
ಚಿಕ್ಕವಯಸ್ಸಿನಿಂದಲೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಸಲೀಂ 2018ರಲ್ಲಿ ದೆಹಲಿಯಲ್ಲಿ ಅರೆಸ್ಟ್ ಆಗಿದ್ದ. ಬಳಿಕ ಸಲೀಂ ವಿದೇಶಕ್ಕೆ ಪರಾರಿಯಾಗಿದ್ದ ಅಲ್ಲಿಂದ ಶಸ್ತ್ರಾಸ್ತ್ರ ಪೂರೈಕೆ ಜಾಲ ನಿರ್ವಹಿಸಲು ಪ್ರಾರಂಭಿಸಿದ್ದ. ಕೊನೆಗೆ ನೇಪಾಳದಲ್ಲಿ ಅಡಗಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಲವು ದಿನಗಳಿಂದ ಸಲೀಂ ಪಿಸ್ತೂಲ್ ಎಲ್ಲರಿಗೂ ಬೇಕಾಗಿದ್ದ ಉಗ್ರನಾಗಿದ್ದ. ಸಲೀಂ ಪಿಸ್ತೂಲ್ ಕಳೆದ ಹಲವಾರು ವರ್ಷಗಳಿಂದ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಹಾಶಿಂ ಬಾಬಾ ಸೇರಿದಂತೆ ಅನೇಕ ದರೋಡೆಕೋರರಿಗೆ ಪಾಕಿಸ್ತಾನದಿಂದ ಗುಣಮಟ್ಟದ ಶಸ್ತ್ರಾಸ್ತ್ರಗಳನ್ನ ಪೂರೈಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಪಾಕಿಸ್ತಾನ ಗುಪ್ತಚರ ಸಂಸ್ಥೆ ISI ಹಾಗೂ ಡಾನ್ ದಾವೂದ್ ಇಬ್ರಾಹಿಂನ ಡಿ ಕಂಪನಿಯೊಂದಿಗೂ ಸಂಪರ್ಕ ಹೊಂದಿದ್ದ ಅನ್ನೋ ರಹಸ್ಯವನ್ನು ತನಿಖಾಧಿಕಾರಿಗಳು ಸಾಕ್ಷಿ ಸಮೇತ ಬಯಲಿಗೆಳೆದಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


