Monday, November 2, 2026
spot_img
More
    spot_img
    HomeStateಬಯಲು ಸೀಮೆಯಲ್ಲಿ ಚಿರತೆ ಪ್ರತ್ಯಕ್ಷ ಹಾಗೂ ದಾಳಿ

    ಬಯಲು ಸೀಮೆಯಲ್ಲಿ ಚಿರತೆ ಪ್ರತ್ಯಕ್ಷ ಹಾಗೂ ದಾಳಿ

    ಕಲಬುರಗಿ ಹೊರವಲಯದ ಪಾಣೆಗಾಂವ್ ಗ್ರಾಮದ ಹೊಲದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಚಿರತೆಯು ಹೊಲದಲ್ಲಿ ಕಟ್ಟಿದ್ದ ಎತ್ತಿನ ಮೇಲೆ ದಾಳಿ ಮಾಡಿ, ಎತ್ತಿನ ಮುಖಕ್ಕೆ ಪರಚಿ ಗಾಯಗೊಳಿಸಿದೆ. ನಾಯಿಯ ತೀವ್ರ ಬೊಗಳುವಿಕೆಯನ್ನು ಗಮನಿಸಿ ಓಡಿ ಬಂದ ಕಾರ್ಮಿಕರ ಕೂಗಾಟಕ್ಕೆ ಭಯಗೊಂಡ ಚಿರತೆ ಸ್ಥಳದಿಂದ ಪರಾರಿಯಾಗಿದೆ.

    ಗ್ರಾಮ ಪಂಚಾಯತ್ ಕೂಡ ಡಂಗೂರ ಸಾರಿ ಎಚ್ಚರಿಕೆಯ ಸಂದೇಶವನ್ನು ಗ್ರಾಮಸ್ಥರಿಗೆ ತಲುಪಿಸಿದೆ. ಅರಣ್ಯ ಇಲಾಖೆಯಿಂದ ಪಾಣೆಗಾಂವ್ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ನಿರಂತರ ಗಸ್ತು ತಿರುಗುವಿಕೆ ಆರಂಭವಾಗಿದ್ದು, ಚಿರತೆಯ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಸಿಕ್ಕರೆ ಬೋನ್ ಇರಿಸಿ ಸೆರೆಹಿಡಿಯುವ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

    ಕೃಷಿ ಕಾರ್ಮಿಕರು ಹೊಲಕ್ಕೆ ಕೆಲಸಕ್ಕೆ ಹೋಗಲು ಹಿಂಜರಿಯುತ್ತಿದ್ದು, ಮನೆಯಲ್ಲಿದ್ದರೂ ರಾತ್ರಿಯ ವೇಳೆ ನೆಮ್ಮದಿಯಾಗಿ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾಮಸ್ಥರು ಭಯ ಪಡುತ್ತಿದ್ದಾರೆ.

    ,ಟ್ರಂಪ್ ಹೊಸ ಇಂಟೆಲ್ ಸಿಇಒ ಲಿಪ್-ಬು ಟಾನ್ ಅವರ ತಕ್ಷಣದ ರಾಜೀನಾಮೆಗೆ ಒತ್ತಾಯ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search