Wednesday, November 11, 2026
spot_img
More
    spot_img
    HomeStateDistrictಮೇಲುಕೋಟೆ ಚಲುವರಾಯಸ್ವಾಮಿ ದೇವಾಲಯ ಹಾಗೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಭೇಟಿ

    ಮೇಲುಕೋಟೆ ಚಲುವರಾಯಸ್ವಾಮಿ ದೇವಾಲಯ ಹಾಗೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಭೇಟಿ

    ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಗೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ವಿಶೇಷ ಸೇನಾ ಹೆಲಿಕ್ಯಾಪ್ಟರ್ ಮೂಲಕ ಬಂದಿಳಿದು ಚೆಲುವರಾಯಸ್ವಾಮಿ ದೇವರ ದರ್ಶನ ಪಡೆದರು.

    ಇದೇ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಧಿಕಾರಿ ಡಾ ಕುಮಾರ,‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

    ಇನ್ನು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಶಿಷ್ಟಾಚಾರದ ಪ್ರಕಾರ ಬರಮಾಡಿಕೊಳ್ಳಲಾಯಿತು.

    ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸಚಿವ ಎಚ್.ಸಿ.ಮಹದೇವಪ್ಪ, ದಕ್ಷಿಣ ವಲಯ ಡಿಐಜಿಪಿ ಡಾ.ಬೋರಲಿಂಗಯ್ಯ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್‌ ಕಮಿಷನರ್‌ ಸೀಮಾ ಲಾಟ್ಕರ್‌ ಸೇರಿದಂತೆ ಹಲವರು ಬರಮಾಡಿಕೊಂಡರು.

    ಮಧ್ಯಾಹ್ನ 3 ಗಂಟೆಯ ವೇಳೆಗೆ ಉಪರಾಷ್ಟ್ರಪತಿ ರಾಧಾಕೃಷ್ಣನ್‌ ಅವರು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

    ಮಹೇಶ್‌ ಬಾಬು – ರಾಜಮೌಳಿ ʼಗ್ಲೋಬ್‌ಟ್ರಾಟರ್‌ʼನ ಮೊದಲ ಪೋಸ್ಟರ್‌ ರಿವೀಲ್;‌ ಖಳನಾಯಕನಾಗಿ ಪೃಥ್ವಿರಾಜ್‌ ಸುಕುಮಾರನ್‌


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search