ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಮಹಾತ್ಮಗಾಂಧಿ ಅವರ ಲೋಗೋ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅನಾವರಣಗೊಳಿಸಿದರು.
ಬಳಿಕ ಸುವರ್ಣಸೌಧದ ಮೊದಲ ಮಹಡಿಯಲ್ಲಿ ಅನುಭವ ಮಂಟಪದ ತೈಲ ಕಲಾಕೃತಿಯನ್ನು ಲೋಕಾರ್ಪಣೆಗೊಳಿಸಿದರು. ನಂತರ ವಿಧಾನ ಸಭೆಯ ಸಭಾಧ್ಯP??Àರ ಕೊಠಡಿಯಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಕಲಾವಿದರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ, ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲï, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್, ಸರ್ಕಾರದ ದೆಹಲಿ ಪ್ರತಿನಿಧಿ ಜಯಚಂದ್ರ, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


