ಬೆಳಗಾವಿ: 12ನೇ ಶತಮಾನದಲ್ಲಿ ಸಮಾಜಕ್ಕೆ ಸಮಾನತೆ ತರುವ ಉದ್ದೇಶದಿಂದ ಬಸವಣ್ಣನವರು ಅಂದಿನ ಕಾಲದಲ್ಲಿಯೇ ಸಮಾನತೆಗಾಗಿ ಅನುಭವ ಮಂಟಪ ಸ್ಥಾಪಿಸಿದ್ದರು. ಆದರೆ ಅದೇ ಇಂದಿನ ಪಾರ್ಲಿಮೆಂಟ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುವರ್ಣಸೌಧದಲ್ಲಿ ಇಂದು ಅನುಭವ ಮಂಟಪ ತೈಲಚಿತ್ರ ಅನಾವರಣಗೊಳಿಸಿರುವ ಬಗ್ಗೆ ಸದನದ ಕಲಾಪದ ವೇಳೆ ಮಾತನಾಡಿದ ಅವರು, ಇಂದು ನನ್ನ ಕೈಯಿಂದ ಬಸವಣ್ಣನವರ ಅನುಭವ ಮಂಟಪದ ತೈಲಚಿತ್ರದ ಅನಾವರಣ ಆಗಿರುವುದು ಸಂತಸದ ಸಂಗತಿಯಾಗಿದೆ. ಬಸವಣ್ಣನವರು 12ನೇ ಶತಮಾನದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ, ಮನುಷ್ಯ ಶೋಷಣೆಯ ವ್ಯವಸ್ಥೆ ಹೋಗಲಾಡಿಸಿ, ಜಾತಿ ರಹಿತ ಸಮ ಸಮಾಜ ತರಬೇಕು ಎನ್ನುವ ಉದ್ದೇಶದಿಂದ, ಬಸವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನು ಮಾಡಿದ್ದರು ಎಂದು ಹೇಳಿದರು.
ಬಸವಣ್ಣನವರು ಮನುಷ್ಯನಲ್ಲಿರುವ ಮೇಲು-ಕೀಳು ಎಂಬ ತಾರತಮ್ಯವನ್ನು ಹೋಗಲಾಡಿಸಿ, ಮನುಷ್ಯನ ಧರ್ಮದಲ್ಲಿ ತಾರತಮ್ಮ ಆಗಲು ಸಾಧ್ಯವಿಲ್ಲ. ಆದರೆ ವ್ಯಕ್ತಿಯ ಯೋಗ್ಯತೆಯನ್ನು ಜಾತಿ, ವರ್ಣ ವ್ಯವಸ್ಥೆಯ ಆಧಾರದ ಮೇಲೆ ಜಾತಿಯನ್ನು ನಿರ್ಧರಿಸಲಾಗುತ್ತಿತ್ತು. ಹೀಗಾಗಿ ಅವರು ಅವಿದ್ಯಾವಂತರಿಗೂ ಅರ್ಥವಾಗುವಂತೆ ತಮ್ಮ ವಚನದಲ್ಲಿ ದಯೆಯೇ ಧರ್ಮದ ಮೂಲ ಎಂದು ಧರ್ಮವನ್ನು ಭೋದಿಸಿದರು ಎಂದು ಬಸವಣ್ಣನವರ ಸಾಧನೆಗಳನ್ನು ಕುರಿತು ಹಾಡಿ ಹೊಗಳಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


