ಬೆಳಗಾವಿ: ಸ್ಥಳೀಯ ಮಟ್ಟದಲ್ಲಿ ದತ್ತಾಂಶ ಸಂಗ್ರಹಿಸಿ ರಾಜ್ಯದಲ್ಲಿ ಅರ್ಹರಿಗೆ ಬಿಪಿಎಲ್ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಸುವರ್ಣಸೌಧದಲ್ಲಿ ಇಂದು ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರದ ಮಾನದಂಡಗಳ ಅಡಿಯಲ್ಲಿಯೇ ಪಡಿತರ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡಲು ನಾವು ಮುಂದಾಗಿದ್ದೇವೆ. ಅದರಲ್ಲಿ ಕೆಲವು ಲೋಪದೋಷಗಳು ಕಂಡುಬಂದ ಕಾರಣ ಅವುಗಳನ್ನು ತಡೆಹಿಡಿಯಲಾಗಿದೆ. ಅರ್ಹರ ಬಿಪಿಎಲ್ ಪಡಿತರ ಕಾರ್ಡ್‌ಗಳನ್ನು ರದ್ದಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಕಾರ್ಡ್ ವಿತರಿಸುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಶೇ.65% ರಿಂದ 75%ರಷ್ಟು ಜನರಿಗೆ ಬಿಪಿಎಲ್ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಹೀಗಾಗಿ ಅವುಗಳನ್ನು ಪರಿಷ್ಕರಿಸಿದ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅರ್ಹರಿಗೆ ಬಿಪಿಎಲ್ ಕಾರ್ಡನ್ನು ನೀಡಲಾಗುವುದು ಎಂದು ವಿಪಕ್ಷಗಳಿಗೆ ಉತ್ತರ ನೀಡಿದ್ದಾರೆ.
ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಅರ್ಹರಿಗೆ ಬಿಪಿಎಲ್ ಕಾರ್ಡ್ ಸಿಕ್ಕೆ ಸಿಗುತ್ತದೆ. ಯಾರೂ ಕೂಡ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಜನತೆಗೆ ಭರವಸೆ ನೀಡಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


