ಪುಣೆ: ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಾವ್‌ಗೆ ಅವಕಾಶ ನಿರಾಕರಿಸಿದ್ದಕ್ಕೆ ಮಹಾರಾಷ್ಟ್ರ ಮಾಜಿ ಸಚಿವ ಹಾಗೂ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲೇಬೇಕೆಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ವಾಸಿಸುತ್ತಿರುವ ಮರಾಠಿ ಮಾತನಾಡುವ ಜನರ ಹಕ್ಕುಗಳು, ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ.
ಬೆಳಗಾವಿಯಲ್ಲಿ ಎಂಇಎಸ್‌ನವರಿಗೆ ಸಾರ್ವಜನಿಕ ಸಭೆ ನಡೆಸಲು ಮಹಾರಾಷ್ಟ್ರ ನಾಯಕರು ಭಾಗವಹಿಸಲು ಅನುಮತಿ ನೀಡಿಲ್ಲ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬೆಳಗಾವಿಯಲ್ಲಿ ಮರಾಠಿ ಭಾಷೆ ಮಾತನಾಡುವವರನ್ನು ತುಳಿಯಲಾಗುತ್ತಿದೆ. ಅಲ್ಲಿ ಮರಾಠಿ ಭಾಷಿಕರ ಸ್ಥಿತಿ ಚಿಂತಾಜನಕವಾಗಿದೆ. ಮಹಾರಾಷ್ಟ್ರ ನಾಯಕರಿಗೆ ಕರ್ನಾಟಕ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಕಿಡಿಕಾರಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


