ಮಡಿಕೇರಿ: ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ದೇಶದ ಪ್ರತಿಷ್ಠಿತ ದೀನ್ ದಯಾಳ್ ಉಪಾಧ್ಯಾಯ್ ಪಂಚಾಯತ್ ಸ್ಟೇಟ್ ವಿಕಾಸ್ ಪುರಸ್ಕಾರ್ ಗೌರವಕ್ಕೆ ಪಾತ್ರವಾಗಿದೆ.
ಈ ತಿಂಗಳ ೧೧ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರ ೨೦೨೪ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬಡತನ ಮುಕ್ತ ಮತ್ತು ಸುಧಾರಿತ ಜೀವನೋಪಾಯ ಪಂಚಾಯಿತಿ ವಿಭಾಗದಲ್ಲಿ ಬಂದಿರುವ ಈ ಪ್ರಶಸ್ತಿ ೧ ಕೋಟಿ ರೂ. ಮೊತ್ತದ ಬಹುಮಾನ ಒಳಗೊಂಡಿದೆ.
ಜಿಲ್ಲಾ ಕೇಂದ್ರ ಮಡಿಕೇರಿಯಿಂದ ೭ ಕಿ.ಮೀ. ದೂರದಲ್ಲಿರುವ ಗಾಳಿಬೀಡು ಗ್ರಾಮ ಪಂಚಾಯತ್ ಅತ್ಯಂತ ಸುಂದರ ಪ್ರಾಕೃತಿಕ ಸೌಂದರ್ಯ ಹೊಂದಿರುವ ಪ್ರದೇಶವಾಗಿದೆ. ನಾಲ್ಕು ಕಂದಾಯ ಗ್ರಾಮಗಳನ್ನು ಒಳಗೊಂಡಿರುವ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ ೧೦ ಚುನಾಯಿತ ಪ್ರತಿನಿಧಿಗಳು ಇದ್ದಾರೆ. ಪಿಡಿಒ ಶಶಿ ಕಿರಣ್ ಕೆ.ಎ. ನೇತೃತ್ವದಲ್ಲಿ ಐವರು ಸಿಬ್ಬಂದಿ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


