Saturday, November 7, 2026
spot_img
More
    spot_img
    HomeLatest newsಆರ್‌ಸಿಬಿ ಅಭಿಮಾನಿಗಳೇ ಡಿಕೆಶಿ ಹೇಳಿದ್ರು ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯ ನಡೆಯಲ್ಲ!

    ಆರ್‌ಸಿಬಿ ಅಭಿಮಾನಿಗಳೇ ಡಿಕೆಶಿ ಹೇಳಿದ್ರು ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯ ನಡೆಯಲ್ಲ!

    ಆರ್‌ಸಿಬಿ ಅಭಿಮಾನಿಗಳೇ, “ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಇದು ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಗೌರವದ ವಿಚಾರ. ಮುಂದಿನ ಐಪಿಎಲ್ ಪಂದ್ಯಗಳನ್ನು ಇಲ್ಲೇ ನಡೆಸುವಂತೆ ಕ್ರಮ ಕೈಗೊಳ್ಳುತ್ತೇವೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    “ನಾನು ಕ್ರಿಕೆಟ್ ಅಭಿಮಾನಿ. ಕಾನೂನು ಚೌಕಟ್ಟಿನಲ್ಲಿ ಜನದಟ್ಟಣೆ ನಿಭಾಯಿಸಿಕೊಂಡು ಕ್ರೀಡಾಂಗಣ ಬೆಳೆಸಲಾಗುವುದು. ಇದರ ಜೊತೆಗೆ ಪರ್ಯಾಯವಾಗಿ ದೊಡ್ಡ ಕ್ರೀಡಾಂಗಣವನ್ನು ನಿರ್ಮಾಣ ಮಾಡುತ್ತೇವೆ” ಎಂದು ಭಾನುವಾರ ಕೆಎಸ್‌ಸಿಎ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

    ಆದರೆ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತದ ಬಳಿಕ 2026ರ ಐಪಿಎಲ್ ಪಂದ್ಯಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿವೆಯೇ? ಎಂಬ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಕುರಿತು ಇನ್ನೂ ಸಹ ಯಾವುದೇ ಅಂತಿಮ ತೀರ್ಮಾನ ಆಗಿಲ್ಲ.

    ವಕೀಲರಿಂದ ಪತ್ರ: ಹಿರಿಯ ವಕೀಲ ಅಮೃತೇಶ್ ಎನ್‌.ಪಿ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಸೇರಿದಂತೆ ಯಾವುದೇ ಕ್ರಿಕೆಟ್ ಪಂದ್ಯ ಆಯೋಜನೆ ಮಾಡಲು ಅನುಮತಿ ನೀಡಬಾರದು ಎಂದು ವಿವಿಧ ಇಲಾಖೆಗಳಿಗೆ ಪತ್ರವನ್ನು ಬರೆದಿದ್ದಾರೆ, ಹಲವಾರು ಕಾರಣಗಳನ್ನು ಉಲ್ಲೇಖಿಸಿದ್ದಾರೆ.

    ಕರ್ನಾಟಕ ಸರ್ಕಾರ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ, ಪೊಲೀಸ್ ಇಲಾಖೆ, ಅಗ್ನಿ ಶಾಮಕ ಮತ್ತು ತುರ್ತು ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಎಸ್‌ಸಿಎಗೆ ಈ ಕುರಿತು ಪತ್ರವನ್ನು ಬರೆಯಲಾಗಿದೆ. ಆದ್ದರಿಂದ ಐಪಿಎಲ್ ಪಂದ್ಯ ಈ ಬಾರಿ ಬೆಂಗಳೂರಿನಲ್ಲಿ ನಡೆಯುವುದಿಲ್ಲವೇ? ಎಂಬ  ಕುರಿತು ಪ್ರಶ್ನೆಗಳು ಹುಟ್ಟಿಕೊಂಡಿವೆ.

    ಪತ್ರದಲ್ಲಿ ವಕೀಲರು ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಕುರಿತು ಹೈಕೋರ್ಟ್‌ನಲ್ಲಿ ಸ್ವಯಂ ಪ್ರೇರಿತ ಅರ್ಜಿಯ ವಿಚಾರಣೆಗಳು ಬಾಕಿ ಇದೆ. ತಜ್ಞರ ವರದಿ ಸಹ ಸ್ಟೇಡಿಯಂ ಸಾರ್ವಜನಿಕ ಸಭೆಗಳಿಗೆ ಅಸುರಕ್ಷಿತ ಎಂದು ವರದಿ ನೀಡಿದೆ.

    ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ರಾಜಕೀಯ ನಿರ್ಧಾರವಾಗಿದೆ. ಸಂಬಂಧಪಟ್ಟ ಇಲಾಖೆಗಳ ಜೊತೆಗೆ ಸಮಾಲೋಚನೆ ನಡೆಸದೇ ಉಪಮುಖ್ಯಮಂತ್ರಿಗಳು ಆರ್‌ಸಿಬಿ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಉತ್ತರ ನೀಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತದ ಕುರಿತು ಕಾಂಗ್ರೆಸ್ ಸರ್ಕಾರ ನ್ಯಾ. ಮೈಕೆಲ್‌ ಡಿ ಕುನ್ಹಾ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯನ್ನು ನಡೆಸಿದೆ. ಈ ತನಿಖಾ ವರದಿಯಲ್ಲಿ ಸಹ ಕ್ರೀಡಾಂಗಣವನ್ನು ಸಾಮೂಹಿಕ ಸಭೆಗಳಿಗೆ ಬಳಕೆ ಸೂಕ್ತವಲ್ಲ ಎಂದು ಶಿಫಾರಸು ಮಾಡಲಾಗಿದೆ ಎಂದು ಪತ್ರದಲ್ಲಿ ವಕೀಲರು ವಿವರಿಸಿದ್ದಾರೆ.

    ಬೆಂಗಳೂರು ನಗರದ ಹೊರವಲಯದಲ್ಲಿ ಸುರಕ್ಷಿತವಾದ ಕ್ರೀಡಾಂಗಣಗಳು ಲಭ್ಯವಿದೆ. ಅಲ್ಲಿ ಪಂದ್ಯಗಳನ್ನು ಆಯೋಜಿಸಬಹುದು. ಈಗ ಅತ್ಯಾಧುನಿಕ ತಂತ್ರಜ್ಞಾನಗಳು ಲಭ್ಯವಿದ್ದು, ಪಂದ್ಯ ನೇರ ಪ್ರಸಾರ ಮಾಡಬಹುದು ಎಂದು ಪತ್ರದಲ್ಲಿ ವಕೀಲರು ಹೇಳಿದ್ದಾರೆ.

    18 ವರ್ಷಗಳ ಬಳಿಕ ಆರ್‌ಸಿಬಿ ತಂಡ ಐಪಿಎಲ್ ಫೈನಲ್ ಪಂದ್ಯವನ್ನು ಗೆದ್ದು ಕಪ್ ಗೆದ್ದಿತ್ತು. ಆಗ ಬೆಂಗಳೂರಿನಲ್ಲಿ ವಿಜಯೋತ್ಸವ ಆಯೋಜನೆ ಮಾಡಲಾಗಿತ್ತು. ಆರ್​ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಆ ಬಳಿಕ ಸ್ಟೇಡಿಯಂನಲ್ಲಿ ಯಾವುದೇ ಕ್ರಿಕೆಟ್ ಪಂದ್ಯಗಳು ನಡೆದಿಲ್ಲ.

    ಈಗ 2026ರ ಐಪಿಎಲ್ ಪಂದ್ಯದ ತಯಾರಿಗಳು ನಡೆಯುತ್ತಿವೆ. ಆದರೆ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಲಿವೆಯೇ? ಇಲ್ಲವೇ? ಎಂಬುದು ಇನ್ಣೂ ಸಹ ಖಚಿತವಾಗಿಲ್ಲ. ಆದರೆ ಡಿ.ಕೆ.ಶಿವಕುಮಾರ್ ಐಪಿಎಲ್ ಪಂದ್ಯ ಬೆಂಗಳೂರು ನಗರದಿಂದ ಸ್ಥಳಾಂತರವಾಗಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search