Friday, August 7, 2026
spot_img
More
    spot_img
    HomeBreaking Newsಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

    ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

    ಬೆಂಗಳೂರು: ಈ ಮೊದಲೇ ಡಿಸೆಂಬರ್​​ನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ( SSLC and PUC Exam-1 ) ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು.ಇಂದು ಶಾಲಾ ಶಿಕ್ಷಣ ಇಲಾಖೆಯಿಂದ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. ಅದರಲ್ಲಿ 2004. 25ನೇ ಸಾಲಿನ ಎಸ್.ಎಸ್.ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಿರುವುದಾಗಿ ತಿಳಿಸಿದ್ದಾರೆ.ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ಹಾಗೂ, ಮಾರ್ಚ್ 21ರಿಂದ ಏಪ್ರಿಲ್ 04-04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆಯಲಿವೆ.ರಾಜ್ಯದ ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಶಾಲಾ, ಕಾಲೇಜುಗಳ ಪ್ರಕಟಣಾ ಫಲಕದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.ದ್ವೀತೀಯ ಪಿಯು ಎಲ್ಲ ಅಂತಿಮ ಪರೀಕ್ಷೆಯು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿವೆ. ಎಲ್ಲ ವಿಷಯಗಳಿಗೂ ವಿಷಯ ಸಂಕೇತಗಳನ್ನು ಕೊಡಲಾಗಿದ್ದು, ಆಯಾ ವಿಷಯಕ್ಕೆ ಸಂಬಂಧಿಸಿದಂತೆ ಗರಿಷ್ಠ 80 ಅಂಕಗಳಿಗೆ ಲಿಖಿತ ಪರೀಕ್ಷೆಗಳು ನಡೆಯಲಿವೆ.ಯಾವ ದಿನ, ಯಾವ ಪರೀಕ್ಷೆ ಎನ್ನುವ ಸಂಪೂರ್ಣ ವಿವರ ಈ ಕೆಳಗಿನಂತಿದೆ

    Advertisement

    SSLC ಪರೀಕ್ಷೆ -1 ವೇಳಾಪಟ್ಟಿ

    • ಮಾರ್ಚ್ 21- ಪ್ರಥಮ ಭಾಷೆ
    • ಮಾರ್ಚ್ 24- ಗಣಿತ
    • ಮಾರ್ಚ್ 26- ದ್ವಿತೀಯ ಭಾಷೆ
    • ಮಾರ್ಚ್ 29- ಸಮಾಜ ವಿಜ್ಞಾನ
    • ಏಪ್ರಿಲ್ 2- ವಿಜ್ಞಾನ
    • ಏಪ್ರಿಲ್ 4- ತೃತೀಯ ಭಾಷೆ

    ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ

    • ಮಾರ್ಚ್ 1- ಕನ್ನಡ, ಅರೇಬಿಕ್
    • ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
    • ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
    • ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
    • ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ.
    • ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
    • ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
    • ಮಾರ್ಚ್ 13- ಅರ್ಥಶಾಸ್ತ್ರ.
    • ಮಾರ್ಚ್ 15- ಇಂಗ್ಲಿಷ್.
    • ಮಾರ್ಚ್ 17- ಭೂಗೋಳಶಾಸ್ತ್ರ.
    • ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
    • ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್.
    • ಮಾರ್ಚ್ 20- ಹಿಂದಿ.

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading