ಬೆಂಗಳೂರು: ಇಂಡಿಯಾ ಎಂಬ ಹೆಸರಿನಲ್ಲಿ ಕಾಂಗ್ರೆಸ್ ರಚಿಸಿದ್ದ ಮೈತ್ರಿಕೂಟದಿಂದ ಇದೀಗ ಕಾಂಗ್ರೆಸ್ ಪಕ್ಷವನ್ನೇ ಹೊರಹಾಕಲಾಗಿದೆ. ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಕಟ್ಟಿದ ಗೂಡಿನಿಂದ ಕಾಂಗ್ರೆಸ್ ಪಕ್ಷವೇ ಹೊರಬಿದ್ದಿದೆ. ದೆಹಲಿ ಅಸೆಂಬ್ಲಿ ಚುನಾವಣೆ ಕಾಂಗ್ರೆಸ್ ಪಾಲಿಗೆ ಅಕ್ಷರಶಃ ಅಂತಿಮಯಾತ್ರೆ ಎಂಬಂತಾಗಿದೆ. ಕಾಂಗ್ರೆಸ್ ಸಹವರ್ತಿ ಪಕ್ಷಗಳು ಸೇರಿಕೊಂಡು ಕಾಂಗ್ರೆಸ್ ಮುಕ್ತ ಭಾರತಕ್ಕೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ.
ಇಂಡಿ ಕೂಟದೊಳಗಿನ ಕಲಹವನ್ನು ಉಲ್ಲೇಖಿಸಿ ಒಕ್ಕೂಟದ ಪ್ರಮುಖ ನಾಯಕ ಜಮ್ಮು & ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇಂಡಿಯಾ ಒಕ್ಕೂಟವನ್ನೇ ಬರ್ಖಾಸ್ತು ಮಾಡಲು ಸಲಹೆ ನೀಡಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ಸಿನ ನಾಯಕತ್ವವನ್ನೇ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳು ಟೀಕಿಸುತ್ತಿವೆ.
ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿರುವುದು ಕಾಂಗ್ರೆಸ್ ವಿರುದ್ಧ ದೇಶದಾದ್ಯಂತ ಎದ್ದಿರುವ ಆಕ್ರೋಶದ ಅಲೆಗಳಿಗೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಚಿಂತನೆಗಳು ಈ ದೇಶಕ್ಕೆ ಮಾರಕ ಎಂಬುದನ್ನು ಕಾಂಗ್ರೆಸ್ ಸಹವರ್ತಿಗಳೇ ಅರಿತುಕೊಂಡಿದ್ದಾರೆ ಎಂದು ಹೇಳುವ ಮೂಲಕ ಇಂಡಿಯಾ ಮೈತ್ರಿಕೂಟದ ವಿರುದ್ಧ ಬಿಜೆಪಿ ಕಿಡಿಕಾರಿದ್ದು, ಇಂಡಿಯಾ ಒಕ್ಕೂಟ ಯಾವುದೇ ಕಾರಣಕ್ಕೂ ಮುಂದಿನ ದಿನಗಳಲ್ಲೂ ಅಧಿಕಾರಕ್ಕೆ ಬರಲ್ಲ. ಅದು ವಿರೋಧ ಪಕ್ಷದಲ್ಲಿಯೇ ಕುಳಿತುಕೊಳ್ಳಲಿದೆ ಎಂದು ಕಿಡಿಕಾರಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


