ಬೆಂಗಳೂರು: ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಸ್ವಪಕ್ಷದಲ್ಲೇ ಆಕ್ರೋಶ ವ್ಯಕ್ತವಾಗಿದ್ದು, ಪಕ್ಷದಿಂದಲೇ ಉಚ್ಛಾಟನೆ ಮಾಡುವಂತೆ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು ಕ್ಷೇತ್ರದಲ್ಲಿ ಬಾಕಿ ಇರುವ ಅಭಿವೃದ್ಧಿ ಕೆಲಸಗಳನ್ನು ಪೂರ್ಣಗೊಳಿಸುವಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವರನ್ನು ಭೇಟಿಯಾಗಿರುವುದು ಬಿಜೆಪಿ ನಾಯಕರನ್ನು ಕೆರಳುವಂತೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ತೀವ್ರ ಮುಜುಗರ ಆಗುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಇದೆಲ್ಲದರ ಜೊತೆಗೆ ಪ್ರತಾಪ್ ಸಿಂಹ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿರುವುದು ಈ ಭಾಗದ ಬಿಜೆಪಿ ನಾಯಕರ ಕಣ್ಣು ಕೆಂಪಾಗಿಸಿದೆ.
ಮಾಜಿ ಸಂಸದ ಪ್ರತಾಪ್ ಪಕ್ಷಕ್ಕೆ ಮುಜುಗರ ಆಗುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪ ಮಾಡಿದ್ದು, ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಆಗ್ರಹಿಸಿದ್ದಾರೆ.
ಇನ್ನು ಮೈಸೂರಿನ ಪ್ರಿನ್ಸೆಸ್ ರಸ್ತೆಯನ್ನು ಸಿದ್ದರಾಮಯ್ಯ ರಸ್ತೆ ಎಂದು ಮರು ನಾಮಕರಣ ಮಾಡುವ ನಿರ್ಧಾರ ವಿವಾದಕ್ಕೆ ಕಾರಣವಾಗಿತ್ತು. ಇದಕ್ಕೆ ಪ್ರತಾಪ್ ಸಿಂಹ ಮಾತ್ರ ಸಿದ್ದರಾಮಯ್ಯ ಹೆಸರಿಡುವ ನಿರ್ಧಾರ ಸರಿ ಇದೆ ಎಂದಿದ್ದರು.
ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಬಿಜೆಪಿ ಹೈಕಮಾಂಡ್ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


