ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಆಶಾ ಕಾರ್ಯಕರ್ತೆಯರ ಸಂಘಟನೆಯೊಂದಿಗೆ ನಡೆಸಿದ ಸಂಧಾನ ಯಶಸ್ವಿಯಾಗಿದೆ.
ಮುಷ್ಕರ ಹಿಂಪಡೆದುಕೊಳ್ಳಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆ. ಕಳೆದ ಐದು ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಿರಂತರ ಹೋರಾಟ ನಡೆಸುತ್ತಿದ್ದರು. 15,000 ರೂ ಮಾಸಿಕ ವೇತನ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟ ಕೈಗೊಂಡಿದ್ದರು.
ಇಂದು ಸಿಎಂ ಸಿದ್ದರಾಮಯ್ಯ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರು ಹೋರಾಟ ನಡೆಸುವುದನ್ನು ಕೈಬಿಟ್ಟಿದ್ದಾರೆ.
ಕಳೆದ ಮೂರು ತಿಂಗಳಿನಿಂದ ಬಾಕಿ ಉಳಿಸಿಕೊಂಡ ಪ್ರೋತ್ಸಾಹಧನ ಮೊತ್ತವನ್ನು ಕೂಡಲೇ ಪಾವತಿಸಬೇಕು. ಕೆಲಸಕ್ಕೆ ತಕ್ಕಂತೆ ಪ್ರೋತ್ಸಾಹ ಧನ ನೀಡಬೇಕು ಎಂಬುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮಂಗಳವಾರದಿಂದ ಆಶಾ ಕಾರ್ಯಕರ್ತೆಯರು ಕೊರೆಯುವ ಚಳಿಯನ್ನು ಲೆಕ್ಕಿಸದೇ ಅಹೋರಾತ್ರಿ ಮುಷ್ಕರ ಮುಂದುವರೆಸಿದ್ದರು.
ಈ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದುಕೊಳ್ಳಲು ಆಶಾ ಕಾರ್ಯಕರ್ತೆಯರ ನಿರ್ಧಾರ ಮಾಡಿದ್ದಾರೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


