ಬೆಂಗಳೂರು: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಸಿಕ್ಕಿಲ್ಲ ಅಂದ್ರೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ಎನ್ನುವ ಮೂಲಕ ಕಾಂಗ್ರೆಸ್ ಡಿನ್ನರ್ ಮೀಟಿಂಗ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಸಿಕ್ಕಿಲ್ಲ ಎಂದರೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ, ಈ ಮಧ್ಯೆ ಡಿನ್ನರ್ ಮೀಟಿಂಗ್ ಯಾಕೆ ಎಂದು ಪ್ರಶ್ನೆ ಮಾಡಿದರು.
ದಲಿತ ಶಾಸಕರು, ನಾಯಕರು, ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಕೊಟ್ಟಿಲ್ಲ. ಅದಕ್ಕೆ ಸಭೆ ಮಾಡ್ತೀವಿ ಎಂದು ಹೇಳುತ್ತಾರೆ. ಡಿನ್ನರ್ ಪಾರ್ಟಿ ಮಾಡಿ ಚರ್ಚೆ ಮಾಡ್ತೀವಿ ಅಂತಾರೆ. ಡಿನ್ನರ್ ಪಾರ್ಟಿಯಲ್ಲಿ ಚರ್ಚೆ ಮಾಡೋದಾದರೆ ಕ್ಯಾಬಿನೆಟ್ ಇರೋದು ಯಾಕೆ ಎಂದು ಪ್ರಶ್ನೆ ಮಾಡಿದರು.
ಎಸ್ಸಿ, ಎಸ್ಟಿ ಇರಲಿ ಯಾವುದೇ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸಿಗದೇ ಇದ್ದರೆ ಕ್ಯಾಬಿನೆಟ್ ಚರ್ಚೆ ಮಾಡಬೇಕಾ ಅಥವಾ ಬೇರೆ ಕಡೆ ಊಟಕ್ಕೆ ಸೇರಿ ಡಿನ್ನರ್‌ನಲ್ಲಿ ಚರ್ಚೆ ಮಾಡ್ತೀರಾ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಕಾಂಗ್ರೆಸ್‌ನಲ್ಲಿ ಸಿಎಂ ಪೈಟ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರಯ, ಅದು ಅವರ ಪಕ್ಷದ ವಿಚಾರ. ಅವರ ಪಕ್ಷದ ವಿಚಾರ ಅವರು ಚರ್ಚೆ ಮಾಡಿಕೊಳ್ಳಲಿ ಬಿಡಿ ಎಂದು ಜಾರಿಕೊಂಡರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


