Monday, March 30, 2026
spot_img
More
    spot_img
    HomeTop Storyಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪವಿತ್ರ ಸ್ನಾನ

    ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪವಿತ್ರ ಸ್ನಾನ

    ಪ್ರಯಾಗ್‌ ರಾಜ್:‌ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಭೇಟಿ ನೀಡಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.

    ಇಂದು ಪ್ರಯಾಗ್‌ ರಾಜ್‌ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲೆ ಆನಂದಿಬೆಲ್‌ ಪಟೇಲ್‌ ಹಾಗೂ ಸಿಎಂ ಯೋಗಿ ಆದಿತ್ಯನಾಥ್‌ ಅವರು ಸ್ವಾಗತಿಸಿದರು.

    ಬಳಿಕ ಪ್ರಯಾಗ್‌ ರಾಜ್‌ನ ತ್ರಿವೇಣಿ ಸಂಗಮಕ್ಕೆ ತೆರಳಿದ ಮುರ್ಮು ಅವರು, ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಸ್ನಾನದ ಬಳಿಕ ಅಕ್ಷಯವತ್‌ ಮತ್ತು ಬಡೇ ಹನುಮಾನ್‌ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ಸಹ ಇದ್ದರು.

    ಇನ್ನು ಜನವರಿ.13ರಿಂದ ಆರಂಭವಾಗಿರುವ ಮಹಾಕುಂಭಮೇಳವು ಶಿವರಾತ್ರಿವರೆಗೂ ನಡೆಯಲಿದೆ. ಇಲ್ಲಿಯವರೆಗೆ 50 ಕೋಟಿಗೂ ಅಧಿಕ ಜನರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದು, ಮಹಾಕುಂಭಮೇಳ ನಡೆಯುವ ತನಕ ಇನ್ನೂ ಕೋಟ್ಯಾಂತರ ಜನರು ಪವಿತ್ರ ಸ್ನಾನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಮಹಾಕುಂಭಮೇಳವು ವಿಶ್ವದ ಅತಿದೊಡ್ಡ ಆಧ್ಮಾತ್ಮಿಕ ಮತ್ತು ಸಾಂಸ್ಕೃತಿಕ ಸಭೆಯಾಗಿದ್ದು, ಜಗತ್ತಿನಾದ್ಯಂತ ಕೋಟ್ಯಾಂತರ ಜನರನ್ನು ತನ್ನತ್ತ ಆಕರ್ಷಿಸುತ್ತಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬಿಗ್ ನ್ಯೂಸ್! ಬೆಂಗಳೂರು ಕರಗ ಉತ್ಸವಕ್ಕೆ ಸಜ್ಜು—1000ಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆ, ₹1.70 ಕೋಟಿ ವೆಚ್ಚ!

    “ಬೆಂಗಳೂರು ಕರಗ ಉತ್ಸವ 2026” ಮತ್ತೆ ನಗರಕ್ಕೆ ಸಾಂಸ್ಕೃತಿಕ ಸಂಭ್ರಮ ತರಲು ಸಜ್ಜಾಗಿದೆ! ಏಪ್ರಿಲ್ 1ರಂದು ನಡೆಯಲಿರುವ ಈ ಐತಿಹಾಸಿಕ ಉತ್ಸವಕ್ಕಾಗಿ ಭರ್ಜರಿ ಸಿದ್ಧತೆಗಳು ನಡೆಯುತ್ತಿದ್ದು, ಭದ್ರತೆ ಮತ್ತು ವ್ಯವಸ್ಥೆಗಾಗಿ ಸರ್ಕಾರದಿಂದ ವಿಶೇಷ...

    ಬ್ರೇಕಿಂಗ್ರಾ! ಮನವಮಿ ಹಬ್ಬಕ್ಕೆ ಮಾರುಕಟ್ಟೆ ಬಂದ್ ಆಗುತ್ತಾ? ಹೂಡಿಕೆದಾರರಿಗೆ ಕ್ಲಿಯರ್ ಮಾಹಿತಿ!

    “ಸ್ಟಾಕ್ ಮಾರ್ಕೆಟ್ ಹಾಲಿಡೇ 2026” ಇದೀಗ ಹೂಡಿಕೆದಾರರಲ್ಲಿ ದೊಡ್ಡ ಗೊಂದಲ ಮೂಡಿಸಿದೆ. ರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ಅಥವಾ ಶುಕ್ರವಾರ ಷೇರು ಮಾರುಕಟ್ಟೆ ಬಂದ್ ಆಗುತ್ತದೆಯಾ? ಎಂಬ ಪ್ರಶ್ನೆ ಟ್ರೇಡರ್‌ಗಳ ನಡುವೆ ಭಾರೀ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading