Thursday, September 3, 2026
spot_img
More
    spot_img
    HomeLatest newsಕುಂಭಮೇಳದಲ್ಲಿ ಡಿಕೆಶಿ ಪುಣ್ಯಸ್ನಾನ; ಎಷ್ಟು ಪಾಪ ಕಳೀತು ಎಂದು ವ್ಯಂಗ್ಯವಾಡಿದ ಯತ್ನಾಳ್‌

    ಕುಂಭಮೇಳದಲ್ಲಿ ಡಿಕೆಶಿ ಪುಣ್ಯಸ್ನಾನ; ಎಷ್ಟು ಪಾಪ ಕಳೀತು ಎಂದು ವ್ಯಂಗ್ಯವಾಡಿದ ಯತ್ನಾಳ್‌

    ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪುಣ್ಯಸ್ನಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿ ಬಳಿ ಎಷ್ಟು ಪಾಪ ಕಳೀತು ಎಂದು ವರದಿ ಪಡೆಯಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಲೇವಡಿ ಮಾಡಿದ್ದಾರೆ.

    Advertisement

    ಈ ಬಗ್ಗೆ ದೆಹಲಿಯಲ್ಲಿಂದು ಮಾಧ್ಯದಮವರೊಂದಿಗೆ ಮಾತನಾಡಿದ ಅವರು, ಅವರವರ ವೈಯಕ್ತಿಕ ಭಕ್ತಿಯ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಡಿಸಿಎಂ ಡಿಕೆಶಿ ಅವರು ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಎಷ್ಟು ಪಾಪ ಕಳೆದು ಹೋಯಿತು ಎಂದು ಮಲ್ಲಿಕಾರ್ಜುನ ಖರ್ಗೆ ವರದಿ ಪಡೆಯಬೇಕು ಎಂದು ಆಗ್ರಹಿಸಿದರು.

    ಇನ್ನು ಯತ್ನಾಳ್‌ ಟೀಂ ದೆಹಲಿಗೆ ತೆರಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ದೆಹಲಿಗೆ ಸಚಿವ ಸೋಮಣ್ಣ ಅವರ ಮನೆ ಪೂಜೆ ಸಲುವಾಗಿ ಬಂದಿದ್ದೇವೆ. ಮುಂದೆ ಏನಾಗುತ್ತದೆ ಎಂದು ನಮಗೆ ಗೊತ್ತಿಲ್ಲ. ಎಲ್ಲರಿಗೂ ಬನ್ನಿ ಎಂದು ಆಹ್ವಾನ ನೀಡಿದ್ದರು. ಹಾಗಾಗಿ ಇಲ್ಲಿಗೆ ಬಂದಿದ್ದೇವೆ. ಸೋಮಣ್ಣನವರು ನಮಗೆ ಆತ್ಮೀಯರಾಗಿದ್ದಾರೆ. ರೈಲ್ವೆ ಮಂತ್ರಿಗಳಾದ ಮೇಲೆ ನಮ್ಮ ಕೆಲಸ ಮಾಡಿಕೊಟ್ಟಿದ್ದಾರೆ ಎಂದರು.

    ಇನ್ನು ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾಗುತ್ತಾರೆ ಎಂಬ ವಿಶ್ವಾಸವಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ಸಂತೋಷ್‌ ಅವರ ಮೇಲೆ ನಂಬಿಕೆ ಇದೆ ಎಂದು ಹೇಳಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading