Tuesday, November 3, 2026
spot_img
More
    spot_img
    HomeChampions Trophy 2025Champions Trophy 2025: ಕಪ್ ಗೆದ್ದು ಚಾಂಪಿಯನ್ ಆದ ಟೀಮ್ ಇಂಡಿಯಾಗೆ ಸಿಕ್ಕ ಹಣವೆಷ್ಟು?

    Champions Trophy 2025: ಕಪ್ ಗೆದ್ದು ಚಾಂಪಿಯನ್ ಆದ ಟೀಮ್ ಇಂಡಿಯಾಗೆ ಸಿಕ್ಕ ಹಣವೆಷ್ಟು?

    ದುಬೈ: ನಿನ್ನೆ ( ಮಾರ್ಚ್ 9 ) ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್‌ಗಳ ಗೆಲುವು ದಾಖಲಿಸಿ ಟ್ರೋಫಿಯನ್ನು ಎತ್ತಿಹಿಡಿದಿದೆ.

    ಪಂದ್ಯದಲ್ಲಿ ಟಾಸ್ ಗೆದ್ದು 50 ಒವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಕಲೆಹಾಕಿದ ನ್ಯೂಜಿಲೆಂಡ್ ಭಾರತಕ್ಕೆ 252 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಭಾರತ 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254ರನ್ ಬಾರಿಸಿತು.

    ಈ ಗೆಲುವಿನ ಮೂಲಕ ಭಾರತ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದ್ದು, ಅತಿಹೆಚ್ಚು ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದ ತಂಡ ಎಂಬ ದಾಖಲೆ ಬರೆದಿದೆ.

    ಟೂರ್ನಿಯಲ್ಲಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಗೆದ್ದು ಬಂದ ಟೀಮ್ ಇಂಡಿಯಾ ಪರ ಒಂದೊಂದು ಪಂದ್ಯದಲ್ಲಿ ಒಬ್ಬೊಬ್ಬ ಆಟಗಾರ ಅಗತ್ಯವಿದ್ದ ಆಟವನ್ನಾಡಿದ್ದಾನೆ. ಅಂತಹ ತಂಡದ ಶ್ರಮದಿಂದಲೇ ಟೀಮ್ ಇಂಡಿಯಾ ಇಂತಹ ಸಾಧನೆ ಮಾಡಲು ಸಾಧ್ಯವಾಗಿದೆ. ಅತ್ತ ಸೋತ ನ್ಯೂಜಿಲೆಂಡ್ ಎರಡನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿಯುವ ತನ್ನ ಕನಸನ್ನು ನನಸು ಮಾಡಿಕೊಳ್ಳಲಾಗದೇ ಮುಗ್ಗರಿಸಿದೆ.

    ಇನ್ನು ಟ್ರೋಫಿ ಗೆದ್ದ ಭಾರತಕ್ಕೆ ಬಹುಮಾನವಾಗಿ 20 ಕೋಟಿ ರೂಪಾಯಿ ಸಿಕ್ಕಿದೆ ಹಾಗೂ ರನ್ನರ್ ಅಪ್ ಆದ ನ್ಯೂಜಿಲೆಂಡ್‌ಗೆ 9.72 ಕೋಟಿ ಲಭಿಸಿದೆ. ಸೆಮಿಫೈನಲ್‌ನಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳಿಗೆ ತಲಾ 4.86 ಕೋಟಿ ರೂಪಾಯಿ ಲಭಿಸಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search