Tuesday, August 11, 2026
spot_img
More
    spot_img
    HomeTop StoryChampions Trophy 2025: ಕೆಎಲ್ ರಾಹುಲ್ ಚಾಂಪಿಯನ್ಸ್ ಟ್ರೋಫಿ ಗೆದ್ದ 5ನೇ ಕನ್ನಡಿಗ; ಇಲ್ಲಿದೆ ಸಂಪೂರ್ಣ...

    Champions Trophy 2025: ಕೆಎಲ್ ರಾಹುಲ್ ಚಾಂಪಿಯನ್ಸ್ ಟ್ರೋಫಿ ಗೆದ್ದ 5ನೇ ಕನ್ನಡಿಗ; ಇಲ್ಲಿದೆ ಸಂಪೂರ್ಣ ಪಟ್ಟಿ

    ದುಬೈ: ನಿನ್ನೆ ( ಮಾರ್ಚ್ 9 ) ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್‌ಗಳ ಗೆಲುವು ದಾಖಲಿಸಿ ಟ್ರೋಫಿಯನ್ನು ಎತ್ತಿಹಿಡಿದಿದೆ.

    Advertisement

    ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ 50 ಒವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಕಲೆಹಾಕಿದ ನ್ಯೂಜಿಲೆಂಡ್ ಭಾರತಕ್ಕೆ 252 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಭಾರತ 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254ರನ್ ಬಾರಿಸಿತು.

    ಈ ಗೆಲುವಿನ ಮೂಲಕ ಭಾರತ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದ್ದು, ಅತಿಹೆಚ್ಚು ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದ ತಂಡ ಎಂಬ ದಾಖಲೆ ಬರೆದಿದೆ.

    ಕಿವೀಸ್ ನೀಡಿದ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ ಪರ ರೋಹಿತ್ ಅರ್ಧಶತಕ ಸಿಡಿಸಿದರೆ, ಶ್ರೇಯಸ್ ಐಯ್ಯರ್ ತಂಡ ಗಿಲ್ ಹಾಗೂ ಕೊಹ್ಲಿ ವಿಕೆಟ್ ಕಳೆದುಕೊಂಡಾಗ ರೋಹಿತ್ ಜತೆ ಸೇರಿ ಅಗತ್ಯವಿದ್ದ ಜತೆಯಾಟವಡಿದರು ಹಾಗೂ ರೋಹಿತ್ ವಿಕೆಟ್ ಬಳಿಕ ಅಕ್ಷರ್ ಪಟೇಲ್ ಜತೆ ಸೇರಿ ಒಳ್ಳೆಯ ಇನ್ನಿಂಗ್ಸ್ ಕಟ್ಟಿದರು. ಕೊನೆಗೆ ಅಜೇಯನಾಗಿ ಉಳಿದ ಕೆಎಲ್ ರಾಹುಲ್ ತಂಡದ ಪರ ಅತ್ಯಗತ್ಯವಾಗಿ ನಿಲ್ಲಲೇಬೇಕಿದ್ದ ಸಂದರ್ಭದಲ್ಲಿ ವಿಕೆಟ್ ಕಾಪಾಡಿಕೊಂಡು ತಂಡವನ್ನು ಗೆಲುವಿನ ದಡ ಸೇರಿಸಿದರು. 33 ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ ಒಂದು ಬೌಂಡರಿ ಸಹಿತ ಅಜೇಯ 34 ರನ್ ಬಾರಿಸಿದ ರಾಹುಲ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಐದನೇ ಕನ್ನಡಿಗ ಎನಿಸಿಕೊಂಡರು.

    ಚಾಂಪಿಯನ್ಸ್ ಟ್ರೋಫಿ ಗೆದ್ದ ಕನ್ನಡ ಕ್ರಿಕೆಟರ್‌ಗಳ ಪಟ್ಟಿ
    ರಾಹುಲ್ ದ್ರಾವಿಡ್ – 2002
    ಅನಿಲ್ ಕುಂಬ್ಳೆ – 2002
    ಜಾಗವಲ್ ಶ್ರೀನಾಥ್ – 2002
    ವಿನಯ್ ಕುಮಾರ್ – 2013
    ಕೆಎಲ್ ರಾಹುಲ್ – 2025


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading