ದುಬೈ: ನಿನ್ನೆ ( ಮಾರ್ಚ್ 9 ) ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್ಗಳ ಗೆಲುವು ದಾಖಲಿಸಿ ಟ್ರೋಫಿಯನ್ನು ಎತ್ತಿಹಿಡಿದಿದೆ.
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ 50 ಒವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಕಲೆಹಾಕಿದ ನ್ಯೂಜಿಲೆಂಡ್ ಭಾರತಕ್ಕೆ 252 ರನ್ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಭಾರತ 49 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಬಾರಿಸಿತು. ಈ ಗೆಲುವಿನ ಮೂಲಕ ಭಾರತ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದ್ದು, ಅತಿಹೆಚ್ಚು ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದ ತಂಡ ಎಂಬ ದಾಖಲೆ ಬರೆದಿದೆ.
ಕಿವೀಸ್ ನೀಡಿದ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ ಪರ ರೋಹಿತ್ ಅರ್ಧಶತಕ ಸಿಡಿಸಿದರೆ, ಶ್ರೇಯಸ್ ಐಯ್ಯರ್ ಭಾರತ ಗಿಲ್ ಹಾಗೂ ಕೊಹ್ಲಿ ವಿಕೆಟ್ ಕಳೆದುಕೊಂಡಾಗ ರೋಹಿತ್ ಜತೆ ಸೇರಿ ಹಾಗೂ ರೋಹಿತ್ ವಿಕೆಟ್ ಬಳಿಕ ಅಕ್ಷರ್ ಪಟೇಲ್ ಜತೆ ಸೇರಿ ಒಳ್ಳೆಯ ಇನ್ನಿಂಗ್ಸ್ ಕಟ್ಟಿದರು.
ನೂರು ರನ್ ಬಾರಿಸುವವರೆಗೂ ವಿಕೆಟ್ ಕಳೆದುಕೊಳ್ಳದೇ ಇದ್ದ ಭಾರತ 122 ರನ್ಗೆ ತನ್ನೆರಡು ವಿಕೆಟ್ಗಳನ್ನು ಕಳೆದುಕೊಂಡಾಗ ಕಣಕ್ಕಿಳಿದ ಶ್ರೇಯಸ್ ಐಯ್ಯರ್ ವಿಕೆಟ್ ಕಾಯ್ದುಕೊಳ್ಳುವುದರ ಜೊತೆಗೆ 48 ರನ್ ಬಾರಿಸಿ ಅತ್ಯುತ್ತಮ ಆಟವನ್ನಾಡಿದರು.
ಶ್ರೇಯಸ್ ಆಡಿದ ಈ ಇನ್ನಿಂಗ್ಸ್ ಬಗ್ಗೆ ರೋಹಿತ್ ಶರ್ಮಾ ಪಂದ್ಯದ ಬಳಿಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಶ್ರೇಯಸ್ ಸೈಲೆಂಟ್ ಹೀರೊ. ಮಧ್ಯಮ ಕ್ರಮಾಂಕದಲ್ಲಿ ಅತ ನಿರ್ಣಾಯಕನಾಗಿದ್ದ. ನಾನು ಔಟ್ ಆದರೂ ಅವನು ಚೆನ್ನಾಗಿ ಆಡಿದ ಅಕ್ಷರ್ ಜೊತೆ ಸೇರಿ ಒಳ್ಳೆಯ ಜತೆಯಾಟವನ್ನಾಡಿದರು’ ಎಂದು ಹೊಗಳಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


