Monday, November 2, 2026
spot_img
More
    spot_img
    HomeTop Storyಇದೇನು ಭಾರತನಾ ಅಥವಾ ಪಾಕಿಸ್ತಾನನಾ? ಭಾರತದ ಗೆಲುವಿನ ಸಂಭ್ರಮಾಚರಣೆ ತಡೆದ ಪೊಲೀಸ್; ವಿಡಿಯೊ

    ಇದೇನು ಭಾರತನಾ ಅಥವಾ ಪಾಕಿಸ್ತಾನನಾ? ಭಾರತದ ಗೆಲುವಿನ ಸಂಭ್ರಮಾಚರಣೆ ತಡೆದ ಪೊಲೀಸ್; ವಿಡಿಯೊ

    ಕರೀಮ್ ನಗರ: ನಿನ್ನೆ ( ಮಾರ್ಚ್ 9 ) ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳ ಅಂತರದಿಂದ ಮಣಿಸಿದ ಟೀಮ್ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತು.

    ಈ ಮೂಲಕ 2002, 2013ರ ಬಳಿಕ ಮತ್ತೊಮ್ಮೆ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದು, ಕ್ರಿಕೆಟ್ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದ ತಂಡ ಎನಿಸಿಕೊಂಡಿದೆ.

    ಭಾರತ ದುಬೈನಲ್ಲಿ ಗೆಲ್ಲುತ್ತಿದ್ದಂತೆ ಇತ್ತ ದೇಶದಾದ್ಯಂತ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ದೇಶದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ, ಕೊಲ್ಕತ್ತಾ, ಹೈದರಾಬಾದ್, ಚೆನ್ನೈ ಸೇರಿದಂತೆ ಇನ್ನೂ ಹಲವೆಡೆ ಜನರು ರಸ್ತೆಗಿಳಿದು ತ್ರಿವರ್ಣ ಧ್ವಜ ಹಿಡಿದು ಭಾರತಕ್ಕೆ ಜೈಕಾರ ಹಾಕಿ ಸಂಭ್ರಮಿಸಿದ್ದಾರೆ.

    ಇನ್ನೂ ಹಲವೆಡೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಟೀಮ್ ಇಂಡಿಯಾದ ವಿಜಯವನ್ನು ಆಚರಿಸಿದ್ದಾರೆ. ದೇಶದ ಗಡಿ ಕಾಶ್ಮೀರದಲ್ಲೂ ಸಹ ಟೀಮ್ ಇಂಡಿಯಾ ಗೆಲುವಿನ ಸಂಭ್ರಮ ನಡೆದಿದೆ. ಹೀಗೆ ಇಡೀ ದೇಶ ಸಂಭ್ರಮಾಚರಣೆಯಲ್ಲಿ ಮುಳುಗಿರುವಾಗ ತೆಲಂಗಾಣದ ಕರೀಮ್ ನಗರದಲ್ಲಿ ಮಾತ್ರ ಭಾರತದ ಗೆಲುವಿನ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಕ್ರಿಕೆಟ್ ಪ್ರೇಮಿಗಳನ್ನು ಪೊಲೀಸರು ತಡೆದಿದ್ದಾರೆ.

    ತ್ರಿವರ್ಣ ಧ್ವಜ ಹಿಡಿದು ನೆರೆದಿದ್ದ ಕ್ರಿಕೆಟ್ ಪ್ರೇಮಿಗಳು ಪೊಲೀಸರು ತಮ್ಮನ್ನು ಸ್ಥಳದಿಂದ ತೆರಳುವಂತೆ ಹೇಳುತ್ತಿದ್ದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೊವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಕೋಮು ಕಾರಣವನ್ನು ನೀಡಿ ಭಾರತದ ಗೆಲುವಿನ ಸಂಭ್ರಮಾಚರಣೆ ಮಾಡಬೇಡಿ ಎಂದು ಪೊಲೀಸರು ನಮ್ಮನ್ನು ತಡೆಯುತ್ತಿದ್ದಾರೆ. ನಾವೇನು ಭಾರತದಲ್ಲಿದ್ದೀವಾ ಅಥವಾ ಪಾಕಿಸ್ತಾನದಲ್ಲಿದ್ದೀವಾ? ಎಂದು ಬರೆದುಕೊಂಡು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಯನ್ನು ಉಲ್ಲೇಖಿಸಿ ಪ್ರಶ್ನಿಸಿ ಆಕ್ರೊಶ ಹೊರಹಾಕಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search