Monday, November 2, 2026
spot_img
More
    spot_img
    HomeSportsCricketBREAKING: ಸತತ ಸೋಲುಂಡ ಸಿಎಸ್‌ಕೆ ನಾಯಕತ್ವ ಬದಲಾವಣೆ; ರುತುರಾಜ್ ಔಟ್, ಎಂಎಸ್ ಧೋನಿ ನೂತನ ನಾಯಕ!

    BREAKING: ಸತತ ಸೋಲುಂಡ ಸಿಎಸ್‌ಕೆ ನಾಯಕತ್ವ ಬದಲಾವಣೆ; ರುತುರಾಜ್ ಔಟ್, ಎಂಎಸ್ ಧೋನಿ ನೂತನ ನಾಯಕ!

    ಪ್ರಸ್ತುತ ನಡೆಯುತ್ತಿರುವ ಹದಿನೆಂಟನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸದ್ಯ 23 ಪಂದ್ಯಗಳು ಮುಕ್ತಾಯವಾಗಿದ್ದು, ಈ ಸಂದರ್ಭದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕನನ್ನು ಬದಲಿಸಿ ಘೋಷಣೆ ಮಾಡಿದೆ.

    ಚೆನ್ನೈ ಸೂಪರ್ ಕಿಂಗ್ಸ್ ಎಂಎಸ್ ಧೋನಿಯನ್ನು ನಾಯಕನನ್ನಾಗಿ ಘೋಷಿಸಿ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದೆ.

    ರುತುರಾಜ್ ಗಾಯಕ್ವಾಡ್ ಕೈಗೆ ಗಾಯ ಸಂಭವಿಸಿರುವ ಕಾರಣ ನಾಯಕತ್ವದ ಜವಾಬ್ದಾರಿ ಕಷ್ಟವಾಗಿರುವ ಕಾರಣ ಈ ನಿರ್ಧಾರವನ್ನು ಟೂರ್ನಿಯ ಐದು ಪಂದ್ಯಗಳ ನಂತರ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ತೆಗೆದುಕೊಂಡಿದೆ. ಕೇವಲ ನಾಯಕತ್ವದಿಂದ ಮಾತ್ರವಲ್ಲದೇ ಆಟಗಾರನಾಗಿಯೂ ಸಹ ರುತುರಾಜ್ ಗಾಯಕ್ವಾಡ್ ಕಣಕ್ಕಿಳಿಯಲು ಅಲಭ್ಯರಾಗಿದ್ದಾರೆ.

    ಟೂರ್ನಿಯಲ್ಲಿ ಆಡಿದ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ನಂತರದ ನಾಲ್ಕು ಪಂದ್ಯಗಳಲ್ಲಿ ಸತತವಾಗಿ ಸೋಲುಂಡಿದೆ. ಇಂತಹ ಸಂದರ್ಭದಲ್ಲಿ ಸಾರ್ವಕಾಲಿಕ ಅತ್ಯುತ್ತಮ ನಾಯಕ ಎನಿಸಿಕೊಂಡಿರುವ ಧೋನಿ ನಾಯಕತ್ವ ವಹಿಸಿಕೊಂಡಿರುವುದು ಯಾವ ರೀತಿಯ ಬದಲಾವಣೆ ತರಲಿದೆ ಎಂಬುದನ್ನು ನೋಡಬೇಕಿದೆ.





    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search