Friday, August 7, 2026
spot_img
More
    spot_img
    HomeSportsCricketIPL 2025: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಸೋಲಿಸಿ 'ಇದು ನನ್ನ ಕ್ರೀಡಾಂಗಣ' ಎಂದು ಎದೆತಟ್ಟಿದ ಕೆಎಲ್ ರಾಹುಲ್;...

    IPL 2025: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಸೋಲಿಸಿ ‘ಇದು ನನ್ನ ಕ್ರೀಡಾಂಗಣ’ ಎಂದು ಎದೆತಟ್ಟಿದ ಕೆಎಲ್ ರಾಹುಲ್; ವಿಡಿಯೊ

    ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಟೂರ್ನಿಯಲ್ಲಿ ಸತತ ನಾಲ್ಕನೇ ಗೆಲುವನ್ನು ಕಂಡಿದೆ.

    Advertisement

    ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 7 ವಿಕೆಟ್ 163 ರನ್ ಗಳಿಸಿ ಡೆಲ್ಲಿ ಕ್ಯಾಪಿಟಲ್ಸ್‌ಗೆ 164 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ಡೆಲ್ಲಿ ಕ್ಯಾಪಿಟಲ್ಸ್ ಕೆಎಲ್ ರಾಹುಲ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 17.5 ಓವರ್‌ಗಳಲ್ಲಿ 4 ವಿಕೆಟ ನಷ್ಟಕ್ಕೆ 169 ರನ್ ಬಾರಿಸಿದೆ.

    ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಾಮಾನ್ಯ ಗುರಿ ನೀಡಿದ್ದರೂ ಡೆಲ್ಲಿ ಕ್ಯಾಪಿಟಲ್ಸ್ 8.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 58 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿಕೊಂಡಿತ್ತು. ಈ ಹಂತದಲ್ಲಿ ಜೊತೆಯಾದ ಟ್ರಿಸ್ಟನ್ ಸ್ಟಬ್ಸ್ ಹಾಗೂ ಕೆಎಲ್ ರಾಹುಲ್ ಜವಾಬ್ದಾರಿಯುತ ಜತೆಯಾಟವನ್ನಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.

    53 ಎಸೆತಗಳಲ್ಲಿ 7 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ ಅಜೇಯ 93 ರನ್ ಬಾರಿಸಿದ ಕೆಎಲ್ ರಾಹುಲ್ ತನ್ನ ತವರು ಕ್ರೀಡಾಂಗಣದಲ್ಲಿ ಅಬ್ಬರಿಸಿ ವಿಭಿನ್ನ ರೀತಿಯಲ್ಲಿ ಸಂಭ್ರಮಿಸಿದರು. ಕೈನಲ್ಲಿ ಎದೆ ತಟ್ಟುತ್ತಾ ನಾನು ಬೆಂಗಳೂರಿನವನು, ಇದು ನನ್ನ ಕ್ರೀಡಾಂಗಣ ನಾನು ಇಲ್ಲಿ ಆಡುವುದನ್ನು ಬಲ್ಲೆ ಎಂದು ಕೆಎಲ್ ರಾಹುಲ್ ಕೈಸನ್ನೆ ಮೂಲಕ ಹೇಳಿದ್ದಾರೆ. ಕೆಎಲ್ ರಾಹುಲ್ ಅವರ ಈ ಸಂಭ್ರಮಾಚರಣೆ ಸದ್ಯ ವೈರಲ್ ಆಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading