ಬೆಂಗಳೂರು: ಇಂದು ( ಏಪ್ರಿಲ್ 10 ) ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಟೂರ್ನಿಯ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಟೂರ್ನಿಯಲ್ಲಿ ನಾಲ್ಕು ಪಂದ್ಯಗಳನ್ನಾಡಿ ಒಂದು ಪಂದ್ಯದಲ್ಲಿ ಮಾತ್ರ ಸೋಲನ್ನು ಅನುಭವಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಲ್ಲಿ ತಾನಾಡಿರುವ ಎಲ್ಲ ಮೂರು ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು ಡೆಲ್ಲಿ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಲಿದೆಯಾ ಎಂಬ ಕುತೂಹಲ ಹೆಚ್ಚಾಗಿದೆ.
ಇನ್ನು ಇತ್ತಂಡಗಳ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ನಡೆಯಲಿರುವ 32ನೇ ಪಂದ್ಯ ಇದಾಗಿದ್ದು, ಇಲ್ಲಿಯವರೆಗೂ ನಡೆದಿರುವ 31 ಪಂದ್ಯಗಳ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 19 ಪಂದ್ಯಗಳಲ್ಲಿ ಗೆದ್ದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 11 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಇನ್ನುಳಿದೊಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


