ಬೆಂಗಳೂರು: ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಐಪಿಎಲ್ನ 24ನೇ ಪಂದ್ಯ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆರಿಸಿಕೊಂಡು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಇನ್ನು ಚೇಸಿಂಗ್ ಟೀಮ್ಗಳ ಸ್ವರ್ಗವೇ ಆಗಿರುವ ಚಿನ್ನಸ್ವಾಮಿಯಲ್ಲಿ ಯಾವುದೇ ತಂಡವಾದರೂ ಚೇಸ್ ಮಾಡಲು ಇಚ್ಛಿಸುತ್ತಾರೆ. ಅದರಂತೆ ಆರ್ಸಿಬಿ ಸಹ ಅದೇ ಯೋಜನೆಯಲ್ಲಿತ್ತು. ರಜತ್ ಪಾಟಿದಾರ್ ಟಾಸ್ ಬಳಿಕ ಸಹ ಇದನ್ನೇ ಉಲ್ಲೇಖಿಸಿದ್ದಾರೆ.
ಆದರೆ ಮೊದಲು ಬ್ಯಾಟಿಂಗ್ ಮಾಡಿ ಒಳ್ಳೆಯ ಮೊತ್ತ ಕಲೆಹಾಕಿ ಅದನ್ನು ಡಿಫೆಂಡ್ ಮಾಡಿಕೊಳ್ಳಲು ಯತ್ನಿಸುತ್ತೇವೆ ಎಂಬ ವಿಶ್ವಾಸವನ್ನು ರಜತ್ ವ್ಯಕ್ತಪಡಿಸಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ರಿಜ್ಜಿ ಹೊರಬಿದ್ದಿದ್ದು, ಫಿಟ್ ಆದ ಫಾಫ್ ಡು ಪ್ಲೆಸಿಸ್ ತಂಡಕ್ಕೆ ಮರಳಿದ್ದಾರೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಆರ್ಸಿಬಿ ಆಡುವ ಬಳಗ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್(ನಾಯಕ), ಲಿಯಾಮ್ ಲಿವಿಂಗ್ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್ವುಡ್, ಯಶ್ ದಯಾಳ್
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಫಾಫ್ ಡು ಪ್ಲೆಸಿಸ್, ಜೇಕ್ ಫ್ರೇಸರ್-ಮೆಕ್ಗುರ್ಕ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್(ನಾಯಕ), ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಮೋಹಿತ್ ಶರ್ಮಾ, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


