ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿಯವರ ಮೂರನೇ ಅವಧಿಯ ಪ್ರಮಾಣವಚನ ಸಮಾರಂಭದ ವೇಳೆ ಪಶ್ಚಿಮ ಬಂಗಾಳದ ಹಾಗೂ ದೇಶದ ಏಕೈಕ ಮಹಿಳಾ ಸಿಎಂ ಮಮತಾ ಬ್ಯಾನರ್ಜಿ ಎಲ್ಲಾ ದೀಪಗಳನ್ನು ಆಫ್ ಮಾಡಿ ಕತ್ತಲಿನಲ್ಲಿ ಕುಳಿತುಕೊಂಡಿದ್ದರು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸಂಸದೆ ಸಾಗರಿಕಾ ಘೋಷ್ ಹೇಳಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಕಾರ್ಯಕ್ರಮದ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡು ಟೀಕಿಸಿರುವ ಟಿಎಂಸಿ ಸಂಸದೆ, ನರೇಂದ್ರ ಮೋದಿಯವರ ಪ್ರಮಾಣ ವಚನವನ್ನು ಆಚರಿಸುವ ಎಲ್ಲರಿಗೂ, ಭಾರತದ ಏಕೈಕ ಮಹಿಳಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಅಧಿಕೃತ ಸಂದೇಶ. ಬ್ಯಾನರ್ಜಿ ಈ ಇಡೀ ಸಮಾರಂಭದ ಸಂದರ್ಭ ತಮ್ಮ ಎಲ್ಲಾ ದೀಪಗಳನ್ನು ಆರಿಸಿ ಕತ್ತಲೆಯಲ್ಲಿ ಕುಳಿತಿದ್ದರು ಎಂದು ತಿಳಿಸಿದ್ದಾರೆ.
ಸಾಗರಿಕಾ ಘೋಷ್ ರಾಷ್ಟ್ರಪತಿ ಭವನದಲ್ಲಿ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಭಾನುವಾರ ಹೇಳಿದ್ದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಸಮಾರಂಭವನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದರು. ನನಗೆ ಆಹ್ವಾನ ಬಂದಿಲ್ಲ ಹಾಗೂ ನಾನು ಹೋಗುವುದಿಲ್ಲ ಎಂದು ಹೇಳಿದ್ದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


