ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ರೋಚಕ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ 6 ರನ್‌ಗಳ ಗೆಲುವು ಸಾಧಿಸಿತು.
119 ರನ್‌ಗಳ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ ಪಾಂಡ್ಯ, ಬುಮ್ರಾ ಮಾರಕ ಬೌಲಿಂಗ್ ದಾಳಿಗೆ ನಲುಗಿತು. 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 113 ರನ್ ಗಳಿಸುವ ಮೂಲಕ 6 ರನ್‌ಗಳಿಂದ ಸೋಲೊಪ್ಪಿಕೊಂಡಿತು
ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಉತ್ತಮ ಆರಂಭ ಪಡೆಯಲಿಲ್ಲ. ವಿರಾಟ್ ಕೊಹ್ಲಿ 4 ರನ್ ಗಳಿಸಿ ಔಟಾದರು. ರೋಹಿತ್ ಶರ್ಮಾ ಕೂಡ 12 ಎಸೆತಗಳಲ್ಲಿ 13 ರನ್ ಗಳಿಸಿ ಔಟಾದರು. ಬಳಿಕ ಜೊತೆಯಾದ ಅಕ್ಷರ್ ಪಟೇಲ್ ಮತ್ತು ರಿಷಬ್ ಪಂತ್ 39 ರನ್‌ಗಳ ಅಮೂಲ್ಯ ಜೊತೆಯಾಟ ಆಡಿದರು. ಅಕ್ಷರ್ ಪಟೇಲ್ 20 ರನ್ ಗಳಿಸಿ ಔಟಾದರೆ, ರಿಷಬ್ ಪಂತ್ 31 ಎಸೆತಗಳಲ್ಲಿ 42 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ 7 ರನ್, ಶಿವಮ್ ದುಬೆ 3 ರನ್, ಹಾರ್ದಿಕ್ ಪಾಂಡ್ಯ 7 ರನ್, ಅರ್ಷದೀಪ್ ಸಿಂಗ್ 9 ರನ್ ಗಳಿಸಿದರು. ಅಂತಿಮವಾಗಿ ಭಾರತ 19 ಓವರ್ ಗಳಲ್ಲಿ 119 ರನ್‌ಗಳಿಗೆ ಆಲೌಟ್ ಆಯಿತು.
ಇದೇ ಮೊದಲ ಬಾರಿಗೆ ಭಾರತ ಪಾಕಿಸ್ತಾನದ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ ಆಲೌಟ್ ಆದ ಕೆಟ್ಟ ದಾಖಲೆ ಮಾಡಿತು. ಪಾಕಿಸ್ತಾನದ ಪರ ನಸೀಮ್ ಶಾ 3 ವಿಕೆಟ್ ಪಡೆದರೆ, ಮೊಹಮ್ಮದ್ ಅಮಿರ್ 2 ವಿಕೆಟ್ ಪಡೆದರು.
ಬುಮ್ರಾ, ಪಾಂಡ್ಯ ಮ್ಯಾಜಿಕ್
119 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಪಾಕಿಸ್ತಾನ ಎಚ್ಚರಿಕೆಯಿಂದೇ ಇನ್ನಿಂಗ್ಸ್ ಆರಂಭಿಸಿದರು. ನಾಯಕ ಬಾಬರ್ ಆಜಂ 10 ಎಸೆತಗಳಲ್ಲಿ 13 ರನ್ ಗಳಿಸಿ ಔಟಾದರು. ಮೊಹಮ್ಮದ್ ರಿಜ್ವಾನ್ 44 ಎಸೆತಗಳಲ್ಲಿ ತಾಳ್ಮೆಯ 31 ರನ್ ಗಳಿಸಿದರೆ. ಭಾರತದ ಬಿಗಿ ಬೌಲಿಂಗ್ ದಾಳಿ ಎದುರು ಪಾಕ್ ಬ್ಯಾಟರ್ ಗಳು ರನ್ ಗಳಿಸಲು ಪರದಾಡಿದರು.
ಜಸ್ಪ್ರೀತ್ ಬುಮ್ರಾ ಮಾರಕ ಬೌಲಿಂಗ್ ದಾಳಿ ಎದುರು ಪಾಕ್ ಬ್ಯಾಟಿಂಗ್ ಪಡೆ ತತ್ತರಿಸಿತು. 4 ಓವರ್ ಗಳಲ್ಲಿ ಕೇವಲ 14 ರನ್ ನೀಡಿ 3 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ 4 ಓವರ್ ಗಳಲ್ಲಿ 24 ರನ್ ನೀಡಿ 2 ವಿಕೆಟ್ ಪಡೆದರು. ಅರ್ಷದೀಪ್ ಸಿಂಗ್ ಮತ್ತು ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


