ಜೂನ್ 4ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟ್ರೊಫಿ ಗೆಲುವಿನ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ ಕಾರಣ ಗೇಟ್ 17ರ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದರು ಹಾಗೂ 50ಕ್ಕೂ ಹೆಚ್ಚು ಮಂದಿ ಗಾಯಗೊಂಡರು.
ಈ ಕಾರ್ಯಕ್ರಮವನ್ನು ಸಹಯೋಗದಲ್ಲಿ ಆಯೋಜಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡಿಎನ್‌ಎ ಹಾಗೂ ಕೆಎಸ್‌ಸಿಎ ವಿರುದ್ಧ ದೂರು ದಾಖಲಾಗಿದ್ದು, ಹೈಕೋರ್ಟ್ ರಾಜ್ಯ ಸರ್ಕಾರದಿಂದಲೂ ಸಹ ವರದಿಯನ್ನು ಕೇಳಿದೆ.
ಇನ್ನು ಈ ಸುದ್ದಿ ರಾಷ್ಟ್ರವ್ಯಾಪಿ ಹರಡಿದ್ದು, ಕಾಂಗ್ರೆಸ್ ಹೈಕಮಾಂಡ್ ಸಹ ರಾಜ್ಯ ಕಾಂಗ್ರೆಸ್‌ಗೆ ವರದಿ ಕೇಳಿದ್ದು, ಈ ನಿಟ್ಟಿನಲ್ಲಿ ಇಂದು ( ಜೂನ್ 10 ) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ಹಾರಿದ್ದು, ವರದಿ ಸಲ್ಲಿಸಿ ಘಟನೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ ಹಾಗೂ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿ ಸಲಹೆ ಪಡೆಯಲಿದ್ದಾರೆ.
ಈಗಾಗಲೇ ದೆಹಲಿಗೆ ಪ್ರಯಾಣ ಆರಂಭಿಸಿರುವ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ಹಾರಿದ್ದಾರೆ.
ಅತ್ತ ಕೆಎಸ್‌ಸಿಎ ಹಾಗೂ ಸಿಎನ್‌ಎ ಎರಡೂ ರಾಜ್ಯ ಸರ್ಕಾರದ ವಿರುದ್ಧವೇ ಹೈಕೋರ್ಟ್‌ಗೆ ಆರೋಪ ಮಾಡಿವೆ. ಕಾರ್ಯಕ್ರಮ ಆಯೋಜಿಸಿದ್ದೇ ರಾಜ್ಯ ಸರ್ಕಾರ ಎಂದು ಹೇಳಿದೆ. ರಾಜ್ಯ ಸರ್ಕಾರ ವಿಧಾನಸೌಧದ ಮುಂದೆ ಕಾರ್ಯಕ್ರಮ ನಡೆಸಿ ಅಭಿಮಾನಿಗಳನ್ನು ಕರೆಸಿದ್ದೇ ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ಆರೋಪಿಸಿವೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


