Thursday, March 26, 2026
spot_img
More
    spot_img
    HomeLatest newsಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶ

    ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶ

    ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶ ಹೊರಡಿಸಿದೆ.

    ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್‌ ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು.

    ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ಇಂದು ವಿಚಾರಣೆ ನಡೆಸಲಾಯಿತು.

    ಇದುವರೆಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ನೋಟಿಸ್‌ ಜಾರಿಯಾಗದ ಹಿನ್ನೆಲೆಯಲ್ಲಿ ನೋಟಿಸ್‌ ಜಾರಿ ಮಾಡಿ ಎಂದು ಕೋರ್ಟ್‌ ಆದೇಶ ಹೊರಡಿಸಿದೆ.

    ನೋಟಿಸ್‌ ಜಾರಿಯಾದ ಪ್ರತಿವಾದಿಗಳಿಗೆ ನೋಟಿಸ್‌ ನೀಡಲು ಸೂಚನೆ ನೀಡಿದ ಕೋರ್ಟ್‌ ವಿಚಾರಣೆಯನ್ನು ಸೆಪ್ಟೆಂಬರ್.‌4ಕ್ಕೆ ಮುಂದೂಡಿಕೆ ಮಾಡಿದೆ.

    ನ್ಯಾಯಮೂರ್ತಿ ವಿ.ಕಾಮೇಶ್ವರರಾವ್‌ ಹಾಗೂ ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ಪೀಠ ಈ ಆದೇಶ ಹೊರಡಿಸಿದ್ದು, ಮುಡಾ ಹಗರಣ ಮತ್ತೆ ಮುನ್ನೆಲೆಗೆ ಬರಲಿದೆ ಎಂದು ಹೇಳಲಾಗುತ್ತಿದೆ.

    ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಮುಡಾ ಹಗರಣದಲ್ಲಿ ಸಿಎಂ ಫ್ಯಾಮಿಲಿ ಭ್ರಷ್ಟಾಚಾರದಿಂದಲೇ ಸೈಟ್‌ ಪಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಇದೀಗ ಹೈಕೋರ್ಟ್‌ ಸಿಎಂ ಪತ್ನಿ ಪಾರ್ವತಿ ಅವರಿಗೆ ನೋಟಿಸ್‌ ನೀಡುವಂತೆ ಸೂಚನೆ ನೀಡಿದ್ದು, ಇದು ಮುಂದಿನ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ತಂದೊಡ್ಡಲಿದೆ ಎನ್ನಲಾಗುತ್ತಿದೆ.

    BREAKING: ಶೇರಿಂಗ್‌ ಮಾತೇ ಇಲ್ಲ 5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್ರಾ! ಮನವಮಿ ಹಬ್ಬಕ್ಕೆ ಮಾರುಕಟ್ಟೆ ಬಂದ್ ಆಗುತ್ತಾ? ಹೂಡಿಕೆದಾರರಿಗೆ ಕ್ಲಿಯರ್ ಮಾಹಿತಿ!

    “ಸ್ಟಾಕ್ ಮಾರ್ಕೆಟ್ ಹಾಲಿಡೇ 2026” ಇದೀಗ ಹೂಡಿಕೆದಾರರಲ್ಲಿ ದೊಡ್ಡ ಗೊಂದಲ ಮೂಡಿಸಿದೆ. ರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ಅಥವಾ ಶುಕ್ರವಾರ ಷೇರು ಮಾರುಕಟ್ಟೆ ಬಂದ್ ಆಗುತ್ತದೆಯಾ? ಎಂಬ ಪ್ರಶ್ನೆ ಟ್ರೇಡರ್‌ಗಳ ನಡುವೆ ಭಾರೀ...

    ಬ್ರೇಕಿಂಗ್! ಮಾರುಕಟ್ಟೆ ರಾಕೆಟ್—ಸೆನ್ಸೆಕ್ಸ್ 1300 ಪಾಯಿಂಟ್ ಜಿಗಿತ! ರೂಪಾಯಿ ಕುಸಿತ, ಚಿನ್ನ ಏರಿಕೆ… ಏನಿದು ಮಿಶ್ರ ಸಿಗ್ನಲ್?

    “ಸ್ಟಾಕ್ ಮಾರ್ಕೆಟ್ 24 ಮಾರ್ಚ್ 2026” ಹೂಡಿಕೆದಾರರಿಗೆ ಒಂದೇ ದಿನದಲ್ಲಿ ರೋಲರ್ ಕೋಸ್ಟರ್ ಅನುಭವ ನೀಡಿದೆ! ಒಂದೆಡೆ ಷೇರು ಮಾರುಕಟ್ಟೆ ಭರ್ಜರಿ ಏರಿಕೆ ಕಂಡಿದ್ದರೆ, ಇನ್ನೊಂದೆಡೆ ರೂಪಾಯಿ ಕುಸಿತ ಮತ್ತು ಚಿನ್ನದ ಬೆಲೆ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading