Monday, March 30, 2026
spot_img
More
    spot_img
    HomeLatest newsBREAKING: ಶೇರಿಂಗ್‌ ಮಾತೇ ಇಲ್ಲ 5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ

    BREAKING: ಶೇರಿಂಗ್‌ ಮಾತೇ ಇಲ್ಲ 5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ

    ನವದೆಹಲಿ: 5 ವರ್ಷಗಳ ಕಾಲ ನಾನೇ ಸಿಎಂ. ಪವರ್‌ ಶೇರಿಂಗ್‌ ಮಾತೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

    ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು, ಸಂದರ್ಶನವೊಂದರಲ್ಲಿ ಈ ಹೇಳಿಕೆ ನೀಡಿದ್ದಾರೆ. ಐದು ವರ್ಷಗಳ ಕಾಲ ನಾನೇ ಸಿಎಂ ಆಗಿ ಇರುತ್ತೇನೆ. ಯಾವುದೇ ಪವರ್‌ ಶೇರಿಂಗ್‌ ಬಗ್ಗೆ ಹೈಕಮಾಂಡ್‌ ಮಟ್ಟದಲ್ಲಿ ಚರ್ಚೆಯಾಗಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್‌ ಕೂಡ ಬದಲಾಗಲಿ ಎಂಬ ಹೇಳಿಕೆಯನ್ನೂ ನೀಡಿಲ್ಲ. ಸಿದ್ದರಾಮಯ್ಯ ಸಿಎಂ ಆಗಿರುವಾಗ ಸಿಎಂ ಬದಲಾವಣೆ ಚರ್ಚೆ ಅನವಶ್ಯಕ ಎಂದು ಡಿಕೆಶಿ ಹೇಳಿದ್ದಾರೆ ಎಂದರು.

    ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಕೂಡ ಸಿಎಂ ಸ್ಥಾನದ ಆಕಾಂಕ್ಷಿ. ಅದರಲ್ಲಿ ತಪ್ಪೇನೂ ಇಲ್ಲ. ಕೆಲ ಶಾಸಕರು ಡಿಕೆಶಿ ಅವರನ್ನು ಬೆಂಬಲಿಸುತ್ತಾರೆ. ಹೆಚ್ಚಿನ ಶಾಸಕರು ಡಿಕೆಶಿ ಅವರನ್ನು ಬೆಂಬಲಿಸಲ್ಲ. ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಹೈಕಮಾಂಡ್‌ ಏನು ನಿರ್ಧಾರ ಕೈಗೊಳ್ಳುವುದೋ ಅದಕ್ಕೆ ನಾನು ಬದ್ಧನಾಗಿದ್ದೇನೆ. ನಾನಾಗಲಿ, ಡಿಕೆಶಿ ಆಗಲಿ ಹೈಕಮಾಂಡ್‌ ಹೇಳಿದ್ದನ್ನು ಪಾಲಿಸಲೇಬೇಕಿದೆ ಎಂದರು.

    ಪವರ್‌ ಶೇರಿಂಗ್‌ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಮುಂದಿನ ಐದು ವರ್ಷವೂ ನಾನೇ ಸಿಎಂ ಆಗಿ ಇರುತ್ತೇನೆ. 2028ರಲ್ಲಿಯೂ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ. ನನ್ನ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಸೆಪ್ಟೆಂಬರ್‌ ವೇಳೆಗೆ ಸಿಎಂ ಬದಲಾವಣೆ ಆಗಲಿದೆ ಎಂಬ ವದಂತಿಗೆ ಸಂಪೂರ್ಣ ಬ್ರೇಕ್‌ ಹಾಕಿದ್ದು, ಡಿಕೆಶಿ ಬೆಂಬಲಿಗರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

    ಭಾರತದ ಈ 7 ನಗರಗಳು ಭೂಕಂಪಗಳಿಗೆ ಒಳಗಾಗಬಹುದು; ಎಚ್ಚರಿಕೆ ನೀಡಿದ ಅಧ್ಯಯನ

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್ರಾ! ಮನವಮಿ ಹಬ್ಬಕ್ಕೆ ಮಾರುಕಟ್ಟೆ ಬಂದ್ ಆಗುತ್ತಾ? ಹೂಡಿಕೆದಾರರಿಗೆ ಕ್ಲಿಯರ್ ಮಾಹಿತಿ!

    “ಸ್ಟಾಕ್ ಮಾರ್ಕೆಟ್ ಹಾಲಿಡೇ 2026” ಇದೀಗ ಹೂಡಿಕೆದಾರರಲ್ಲಿ ದೊಡ್ಡ ಗೊಂದಲ ಮೂಡಿಸಿದೆ. ರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ಅಥವಾ ಶುಕ್ರವಾರ ಷೇರು ಮಾರುಕಟ್ಟೆ ಬಂದ್ ಆಗುತ್ತದೆಯಾ? ಎಂಬ ಪ್ರಶ್ನೆ ಟ್ರೇಡರ್‌ಗಳ ನಡುವೆ ಭಾರೀ...

    ಬ್ರೇಕಿಂಗ್! ಮಾರುಕಟ್ಟೆ ರಾಕೆಟ್—ಸೆನ್ಸೆಕ್ಸ್ 1300 ಪಾಯಿಂಟ್ ಜಿಗಿತ! ರೂಪಾಯಿ ಕುಸಿತ, ಚಿನ್ನ ಏರಿಕೆ… ಏನಿದು ಮಿಶ್ರ ಸಿಗ್ನಲ್?

    “ಸ್ಟಾಕ್ ಮಾರ್ಕೆಟ್ 24 ಮಾರ್ಚ್ 2026” ಹೂಡಿಕೆದಾರರಿಗೆ ಒಂದೇ ದಿನದಲ್ಲಿ ರೋಲರ್ ಕೋಸ್ಟರ್ ಅನುಭವ ನೀಡಿದೆ! ಒಂದೆಡೆ ಷೇರು ಮಾರುಕಟ್ಟೆ ಭರ್ಜರಿ ಏರಿಕೆ ಕಂಡಿದ್ದರೆ, ಇನ್ನೊಂದೆಡೆ ರೂಪಾಯಿ ಕುಸಿತ ಮತ್ತು ಚಿನ್ನದ ಬೆಲೆ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading