ಅಭಿಮಾನ್ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ (Vishnuvardhan) ಸಮಾಧಿಯನ್ನು ಧ್ವಂಸ ಮಾಡಲಾಗಿದೆ. ಅಭಿಮಾನಿಗಳು, ಕೆಲ ಸಿನಿಮಾ ಸೆಲೆಬ್ರಿಟಿಗಳು ಸಹ ವಿಷ್ಣುವರ್ಧನ್ ಸ್ಮಾರಕ ಕುರಿತಾಗಿ ಸರ್ಕಾರಗಳ ಬಳಿ ಮನವಿ ಮಾಡಿದ್ದರು. ಅದರಲ್ಲಿ ಸ್ಟಾರ್ ನಟ ಸುದೀಪ್ ಸಹ ಒಬ್ಬರು. ಇದೀಗ ವಿಷ್ಣುವರ್ಧನ್ ಸಮಾಧಿ ಧ್ವಂಸ ಪ್ರಕರಣದ ಬಳಿಕ ಸುದೀಪ್ ಅವರು ತಮ್ಮ ಬೇಸರವನ್ನು ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.
ವಿಷ್ಣು ಸರ್ ಸಮಾಧಿಯೊಟ್ಟಿಗೆ ಏನು ನಡೆಯಿತೊ ಅದು ನಡೆಯಬಾರದಿತ್ತು. ಇಲ್ಲಿ ಒಂದು ಚೆನ್ನಾಗಿ ಅರ್ಥವಾಗುತ್ತದೆ. ಒಂದೇ ಊರು, ಒಂದೇ ರಾಜ್ಯ, ನಮ್ಮದೇ ಕಲಾವಿದರು ಆದರೆ ಇಲ್ಲಿ ಒಬ್ಬೊಬ್ಬರಿಗೆ ಒಂದೊಂದು ನ್ಯಾಯ. ನಾವುಗಳು ಓಡಾಡಿದ್ದಾಯ್ತು, ನೀವುಗಳು ಹೋರಾಡಿದ್ದಾಯ್ತು, ಎಲ್ಲರಲ್ಲಿ ಮನವಿ ಮಾಡಿಕೊಂಡಿದ್ದಾಯ್ತು. ದಯವಿಟ್ಟು ಇದನ್ನು ಮಾಡಿಕೊಡಿ, ಸ್ವಲ್ಪ ಕರುಣೆ ತೋರಿಸಿ ಎಂದು ಕೇಳಿಕೊಂಡಿದ್ದಾಯ್ತು. ಅಧಿಕಾರದಲ್ಲಿರುವವರಿಗೆ ಇದು ದೊಡ್ಡ ವಿಷಯ ಆಗಿರಲಿಲ್ಲ. ಅವರ ಸಣ್ಣ ಪ್ರಯತ್ನ ಸಹ ಇಂದು ನಡೆದಿರುವುದನ್ನು ತಡೆಯುತ್ತಿತ್ತು’ ಎಂದಿದ್ದಾರೆ ಸುದೀಪ್.
‘ಇನ್ನು ಮುಂದೆ ನಾವು ಭಿಕ್ಷೆ ಬೇಡಬೇಕಾದ ಅವಶ್ಯಕತೆ ಇಲ್ಲ. ಮಾಡಬೇಕು ಎಂದುಕೊಂಡಿದ್ದರೆ ಇಷ್ಟು ಹೊತ್ತಿಗೆ ಮಾಡಿರುತ್ತಿದ್ದರು. ಆದರೆ ಈ ವರೆಗೆ ಮಾಡಿಲ್ಲ ಅಂದರೆ ಅರ್ಥ ಮಾಡಿಕೊಳ್ಳಿ. ಯಾರು? ಏನು? ಹೇಗೆ ಎತ್ತಿಟ್ಟರು ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ. ಈಗ ಅದು ಮುಗಿದು ಹೋದ ಕತೆ. ಅದನ್ನು ಬದಿಗಿಟ್ಟು, ನಾವು ಮುಂದೆ ಆಗಬೇಕಾದ ಕೆಲಸಗಳ ಬಗ್ಗೆ ಗಮನ ಹರಿಸೋಣ’ ಎಂದಿದ್ದಾರೆ ಸುದೀಪ್.
‘ನಾನು ಇತ್ತೀಚೆಗಷ್ಟೆ ವೀರಕಪುತ್ರ ಶ್ರೀನಿವಾಸ್ ಅವರ ಬಳಿ ಮಾತನಾಡುತ್ತಿದ್ದೆ. ಅವರು ಕೆಲವು ಯೋಜನೆಗಳನ್ನು ಹಾಕಿಕೊಂಡಿದ್ದಾರೆ. ಆದಷ್ಟು ಬೇಗ ದೊಡ್ಡ ಪ್ರತಿಮೆ ಕಟ್ಟೋಣ ಎಂದುಕೊಂಡಿದ್ದಾರೆ. ಅದನ್ನು ನಾವು ಮಾಡೋಣ. ಆ ಪ್ರತಿಮೆ ನಿರ್ಮಾಣಕ್ಕೆ ನಾನು ನನ್ನ ಕೈಲಾದ ಸಹಾಯವನ್ನು ಮಾಡಲಿದ್ದೇನೆ’ ಎಂದಿದ್ದಾರೆ ಸುದೀಪ್.
ವಿಷ್ಣುವರ್ಧನ್ ಅವರಿಗೆ ಆಧ್ಯಾತ್ಮದಲ್ಲಿ ಒಲವಿತ್ತು. ಅವರು ಯಾವಾಗಲೂ ಹೇಳುತ್ತಿದ್ದರು. ನಾನು ರೂಪಕ ಆಗಬೇಕು. ಯಾವುದೋ ಕಟ್ಟಡಕ್ಕೆ ಹೋಗಿ ಸೇರಬಾರದು, ಸ್ಥಾವರಗಳಿಗೆ ಉಳಿಯಬಾರದು. ನಾನು ಪಂಚಭೂತಗಳಲ್ಲಿ ಇರಬೇಕು. ನಾವು ನೇಚರ್ ಗೆ ಸಂಬಂಧ ಪಟ್ಟವರು ಅಂತ. ಒಂದು ಲೆಕ್ಕದಲ್ಲಿ ಅವರ ಇನ್ನೊಂದು ಆಸೆ ಈಡೇರಿದಂತೆ ಅನಿಸುತಿದೆ. ಆದ್ರೆ, ಇದು ನಾವು ಎಲ್ಲ ಸಾಮಾನ್ಯ ಅಭಿಮಾನಿಗಳಿಗೆ, ಜನರಿಗೆ ಅರ್ಥ ಆಗುವುದಿಲ್ಲ. ಪೋಸ್ಟ್ ಹಾಕಲು ಹೇಗೆ ಒಂದು ಪೋಸ್ಟ್ ಬಾಕ್ಸ್ ಬೇಕೋ, ಹಾಗೆ ನಾವು ಗೌರವ ಸಲ್ಲಿಸಲು, ಪೂಜೆ ಮಾಡಲು ಒಂದು ದೇವಸ್ಥಾನ ಬೇಕು, ಸ್ಮಾರಕ ಬೇಕು. ವಿಷ್ಣುವರ್ಧನ್ ಅಂತಹ ಒಬ್ಬ ಮೇರೂ ನಟರಿಗೆ, ಬೆಂಗಳೂರಿನಂತಹ ಒಂದು ರಾಜಧಾನಿಯಲ್ಲಿ, ಒಂದು ಅರ್ಧ ಎಕರೆ ಜಾಗ ಕೊಡಲಿಲ್ಲ, ಅವರ ಹೆಸರಿನಲ್ಲಿ, ಒಂದು ಪ್ರಾರ್ಥನೆ ಮಾಡಲು, ಅವರನ್ನು ನೋಡಲು, ಅವರ ಜನ್ಮ ದಿನ ಆಚರಿಸಲು, ನಮ್ಮ ಬಳಿ ಒಂದು ಜಾಗ ಇಲ್ಲ ಅಂದರೆ, ಇದು ಅತ್ಯಂತ ಖಂಡನೀಯ ವಿಷಯ. ನಾನು ಕೇಳ್ಪಟ್ಟೆ, ಬಾಲಕೃಷ್ಣ ಅಂತಹ ಹಿರಿಯ ನಟರ ಸಮಾಧಿಯನ್ನು ಕೂಡ ಒಡೆದು ಹಾಕಿದ್ದಾರೆ. ಅಲ್ಲಿದಂತಹ ಒಂದು ಗಣಪತಿ ದೇವಸ್ಥಾನವೂ ಈಗಲ್ಲಿ ಇಲ್ಲ. ವಿಷ್ಣು ಅವರ ಸ್ಮಾರಕ ಕೂಡ ಅಲ್ಲಿ ಇಲ್ಲ ಅಂದರೆ ಏನು ಅರ್ಥ? ಮನುಷ್ಯನ ಭಾವನೆಗಳಿಗಿಂತ, ಗೌರವಕ್ಕಿಂತ, ಅಭಿಮಾನಕ್ಕಿಂತ, ಈ ಒಂದು ಭೂಮಿ ವ್ಯವಹಾರ ಅಷ್ಟು ದೊಡ್ಡದಾಯಿತಾ? ಹಣ ನಮಗೆ ಅಷ್ಟು ಮುಖ್ಯ ಅಲ್ಲ. ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಇದು ನನ್ನ ವಿನಂತಿ ಎಂದು ಮನವಿ ಮಾಡಿಕೊಂಡಿದ್ದಾರೆ.
ನ್ಯಾಯಾಲಯಕ್ಕೆ ಹೋಗುವುದಾದರೆ, ನಾನೂ ಬರಲು ಸಿದ್ಧ. ಸರ್ಕಾರ, ನ್ಯಾಯಾಲಯ ಮತ್ತು ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ- ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆಒಂದು ಅವಕಾಶ ಮಾಡಿ ಕೊಡಿ. ಅವರು ನಮ್ಮ ಎದೆಯ ಒಳಗೆ ಸದಾ ಇರುತ್ತಾರೆ ನಿಜ. ಹಾಗಂತ ಪ್ರಾರ್ಥನೆ, ಗೌರವಕ್ಕೆ ಸಂಕೇತವಾಗಿ ಒಂದು ಸ್ಥಳ ಬೇಕು. ಆ ಪ್ರೀತಿಗೆ, ಪ್ರೇಮಕ್ಕೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ ಅಂತ ನಾನು ವಿನಂತಿ ಮಾಡುತ್ತೇನೆ ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.
,ಬೆಂಗಳೂರಿನಲ್ಲಿ ಮುಂಗಾರು ಅಬ್ಬರ: ಗ್ರಾಮಾಂತರ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಣೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


