ಇಂದು ಬೆಂಗಳೂರಿನಲ್ಲಿ ಮೋದಿ ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆ ಮಾಡಲಿದ್ದಾರೆ. ಇದೇ ವೇಳೆ ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ಕೂಡ ಇದೇ ವೇಳೆ ನೆರವೇರಿಸಲಿದ್ದು, ಮಧ್ಯಾಹ್ನ 1 ಗಂಟೆಗೆ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣದಲ್ಲಿ ಆಗಮಿಸಿ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿಸಿದ್ದಾರೆ. ಬಳಿಕ ಮಧ್ಯಾಹ್ನ 1.30ಕ್ಕೆ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಲಿದ್ದು, ವೇದಿಕೆ ಮೇಲೆ ಮೋದಿ ಜೊತೆ 13 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಮೊದಲು 10 ಜನರಿಗೆ ಮಾತ್ರ ಇತ್ತು. ಆದ್ರ, ಇದೀಗ ಮತ್ತೆ ಮೂವರಿಗೆ ಅವಕಾಶ ನೀಡಲಾಗಿದೆ.
ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಮನೋಹರ್ ಲಾಲ್, ಅಶ್ವಿನಿ ವೈಷ್ಣವ್, ಶೋಭಾ ಕರಂದ್ಲಾಜೆ, ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸಂಸದ ತೇಜಸ್ವಿ ಸೂರ್ಯ, ಸಂಸದ ಸಿ.ಎನ್. ಮಂಜುನಾಥ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ.
ನಿನ್ನೆಯವರೆಗೂ ಕೇವಲ 10 ಜನರಿಗೆ ಅವಕಾಶ ಎಂದು ಪಟ್ಟಿ ರೆಡಿ ಮಾಡಲಾಗಿತ್ತು. ಆದ್ರೆ, ಇದೀಗ ಕೊಂಚ ಬದಲಾವಣೆ ಮಾಡಲಾಗಿದ್ದು, ಹೆಚ್ಚುವರಿಯಾಗಿ ಆರ್ ಅಶೋಕ್, ಬೈರತಿ ಸುರೇಶ್ ಹಾಗೂ ಸಂಸದ ಡಾ ಸಿಎನ್ ಮಂಜುನಾಥ್ ಅವರಿಗೆ ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ.
,ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್‌ನಲ್ಲಿ ಗುಂಡಿನ ದಾಳಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


