ರಾಜ್ಯ ಕಾಂಗ್ರೆಸ್ ನಲ್ಲಿ ಕೆಲವು ತಿಂಗಳಿನಿಂದ ಸಿಎಂ ಸಿದ್ದರಾಮಯ್ಯ ಕುರ್ಚಿ ಕದನ ನಡೆಯುತ್ತಲೇ ಇದೆ. ಈ ಮಧ್ಯೆ ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆ ನಡೆದಿದೆ. ಕಾಂಗ್ರೆಸ್ ಪಾಳಯದಲ್ಲಿ ಇಂದು ನಾಯಕನೊಬ್ಬನ್ನ ಉಚ್ಛಾಟನೆಯಾಗಿದೆ. ಅದೂ ಕೂಡ ಸಿಎಂ ಸಿದ್ದರಾಮಯ್ಯ ಅವರ ಪರಮಾಪ್ತ ಎಂದೇ ಗುರುತಿಸಿಕೊಂಡಿರುವ G.V ಸೀತಾರಾಮ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಸಿಎಂ ಸಿದ್ದರಾಮಯ್ಯ ಪರಮಾಪ್ತ ಎಂದೇ ಗುರುತಿಸಿಕೊಂಡ G.V ಸೀತಾರಾಮ್ ಅವರನ್ನು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಿದ್ದು ಅವರ ಪ್ರಾಥಮಿಕ ಸದಸ್ಯತ್ವ ಸಹ ರದ್ದುಗೊಳಿಸಲಾಗಿದೆ. ಒಟ್ಟು 6 ವರ್ಷಗಳ ಕಾಲ ಪಕ್ಷದಿಂದ G.V ಸೀತಾರಾಮ್ ಅವರನ್ನು ಉಚ್ಚಾಟನೆಗೊಳಿಸಿ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ಆದೇಶ ಹೊರಡಿಸಿದೆ.
ಅಂದಹಾಗೇ ಒಕ್ಕಲಿಗ ಸಮುದಾಯದ ಬಗ್ಗೆ ಅವಾಚ್ಯ ಶಬ್ದ ಬಳಸಿ ಜಿ.ವಿ ಸೀತಾರಾಮ್ ಮಾತನಾಡಿದ್ದರು. ವೇದಿಕೆಯೊಂದರಲ್ಲಿ ಮಾತನಾಡುವ ವೇಳೆ ಅತಿರೇಕದ ಮಾತನಾಡಿದ G.V ಸೀತಾರಾಮ್, ಅವಾಚ್ಯ ಶಬ್ದ ಬಳಕೆ ಮಾಡಿದ್ದರು. ಈ ಹಿನ್ನಲೆಯಲ್ಲಿ ಸೀತಾರಾಮ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಿ ಆದೇಶಿಸಲಾಗಿದೆ.
,ನನ್ನ ಕ್ಷೇತ್ರದಲ್ಲೂ ಮತಗಳ್ಳತನ ನಡೆದಿದೆ; ದಿನೇಶ್ ಗುಂಡೂರಾವ್ ಆರೋಪ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


