ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉತ್ತರ ಪ್ರದೇಶ ಟಿ20 ಲೀಗ್ನಿಂದ ನಿಷೇಧಿಸಲಾಗಿದೆ ಎಂದು ವರದಿಯಾಗಿದೆ. ಆರ್ಸಿಬಿ ತಂಡದ ಎಡಗೈ ವೇಗಿ ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಉತ್ತರ ಪ್ರದೇಶದ ಗಾಝಿಯಾಬಾದ್ ಠಾಣೆಯಲ್ಲಿ ದಯಾಳ್ ವಿರುದ್ಧ ಪ್ರಕರಣ ದಾಖಲಾಗಿದೆ.
ಯಶ್ ದಯಾಳ್ ಮೇಲೆ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪವಿದೆ. ಈ ಪ್ರಕರಣ ಸಂಬಂಧ ಬಂಧನದ ಭೀತಿಯನ್ನು ಸಹ ಎದುರಿಸುತ್ತಿದ್ದಾರೆ. ಹೀಗಾಗಿ ಯುಪಿ ಕ್ರಿಕೆಟ್ ಅಸೋಸಿಯೇಷನ್ (ಯುಪಿಸಿಎ) ಮುಂಬರುವ ಉತ್ತರ ಪ್ರದೇಶ ಟಿ20 ಲೀಗ್ನಲ್ಲಿ ಕಣಕ್ಕಿಳಿಯದಂತೆ ಯಶ್ ದಯಾಳ್ಗೆ ಸೂಚಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಈ ಬಾರಿಯ ಉತ್ತರ ಪ್ರದೇಶ ಟಿ20 ಲೀಗ್ನಲ್ಲಿ ಯಶ್ ದಯಾಳ್ ಗೋರಖ್‌ಪುರ ಲಯನ್ಸ್ ಪರ ಕಣಕ್ಕಿಳಿಯಬೇಕಿತ್ತು. ಕಳೆದ ಬಾರಿ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಆರ್ಸಿಬಿ ವೇಗಿಯನ್ನು ಗೋರಖ್ಪುರ್ ಲಯನ್ಸ್ ಫ್ರಾಂಚೈಸಿಯು 7 ಲಕ್ಷ ರೂ. ನೀಡಿ ಖರೀದಿಸಿದ್ದರು. ಆದರೀಗ ದಯಾಳ್ ಅವರನ್ನು ಕೈ ಬಿಡುವಂತೆ ಗೋರಖ್ಪುರ್ ಲಯನ್ಸ್ ಫ್ರಾಂಚೈಸಿಗೆ ಯುಪಿಸಿಎ ತಿಳಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿರುವ ಯಶ್ ದಯಾಳ್ ಅವರನ್ನು UPT20 2025 ಲೀಗ್ನಿಂದ ಕೈ ಬಿಡಲಾಗಿದ್ದು, ಹೀಗಾಗಿ ಮುಂಬರುವ ಟೂರ್ನಿಯಲ್ಲಿ ಅವರು ಕಾಣಿಸಿಕೊಳ್ಳುವುದಿಲ್ಲ.
,ಬೆಂಗಳೂರಿನಲ್ಲಿ ಮುಂಗಾರು ಅಬ್ಬರ: ಗ್ರಾಮಾಂತರ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಣೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


